ಹೋರಾಟಕ್ಕೆ ಸರ್ಕಾರ ಸ್ಪಂದನೆ : ಬಿ. ಸಿದ್ದಬಸಪ್ಪ
ಬಿ. ಸಿದ್ದಬಸಪ್ಪ
ಭದ್ರಾವತಿ, ಫೆ. ೧ : ಸರ್ಕಾರಿ ನೌಕರರ ವೇತನ ಶೇ.೧೭ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಧ್ಯಂತರ ಆದೇಶ ಹೊರಡಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ ತಿಳಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿ, ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಮಧ್ಯಂತರ ಆದೇಶ ಸೂಕ್ತವಾಗಿದೆ. ಸರ್ಕಾರಿ ನೌಕರರಿಗೆ ಏ.೧ರಿಂದ ವೇತನ ಹೆಚ್ಚಳವಾಗಲಿದೆ. ನೂತನ ಪಿಂಚಣಿ ಯೋಜನೆ(ಎನ್‌ಪಿಎಸ್) ಕುರಿತು ವರದಿಪಡೆದು ಮರುಪರಿಶೀಲನೆ ನಡೆಸುವುದಾಗಿ ಸಹ ಭರವಸೆ ನೀಡಿದೆ. ಒಟ್ಟಾರೆ ನಮ್ಮ ಹೋರಾಟಕ್ಕೆ ಸರ್ಕಾರ ಸ್ಪಂದಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
No comments:
Post a Comment