ಭದ್ರಾವತಿ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಧ್ವಜಾರೋಹಣದೊಂದಿಗೆ ತಿರುಪಂಗುಣಿ ಉತ್ತರ ಜಾತ್ರಾ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಭದ್ರಾವತಿ, ಮಾ. ೨೯ : ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಧ್ವಜಾರೋಹಣದೊಂದಿಗೆ ತಿರುಪಂಗುಣಿ ಉತ್ತರ ಜಾತ್ರಾ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಶ್ರೀ ಕ್ಷೇತ್ರದ ಶ್ರೀ ಮುರುಗೇಶ್ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಬೆಳಿಗ್ಗೆ ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಎಂ.ಸಿ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಬಸಪ್ಪ, ಮಾಜಿ ಅಧ್ಯಕ್ಷೆ ಪದ್ಮ ಸಂಜೀವ್ ಕುಮಾರ್, ದೇವಸ್ಥಾನ ಮಂಡಳಿ ಅಧ್ಯಕ್ಷ ಎ. ಚಂದ್ರಘೋಷನ್, ಪದಾಧಿಕಾರಿಗಳು, ಸೇವಾಕರ್ತರು ಹಾಗೂ ಸುತ್ತಮುತ್ತಲ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು.
ಕಲ್ಲತ್ತಿಪುರದ ಆರ‍್ಮುಗಂರವರು ಶ್ರೀ ಕ್ಷೇತ್ರಕ್ಕೆ ಗೋವು ದಾನ ನೀಡಿದರು. ಏ.೪ರಂದು ಮಹಾ ಚಂಡಿಕಾ ಯಾಗ ಮತ್ತು ೫ ರಂದು ತಿರುಪಂಗಣಿ ಉತ್ಸವ ವಿಜೃಂಭಣೆಯಿಂದ ಜರುಗಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗಳಿಸುವಂತೆ ಕೋರಲಾಗಿದೆ.
ತರೀಕೆರೆ ತಾಲೂಕಿನ ಕಲ್ಲತ್ತಿಪುರದ ಆರ‍್ಮುಗಂರವರು ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಗೋವು ದಾನ ನೀಡಿದರು.
No comments:
Post a Comment