ಭದ್ರಾವತಿ ನಗರದ ಹೃದಯ ಭಾಗದಲ್ಲಿ ಭದ್ರಾ ಹಳೇಸೇತುವೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿ, ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ ಶನಿವಾರ ತಾಲೂಕು ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
ಭದ್ರಾವತಿ, ಮಾ. ೪ : ನಗರದ ಹೃದಯ ಭಾಗದಲ್ಲಿ ಭದ್ರಾ ಹಳೇಸೇತುವೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿ, ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ ಶನಿವಾರ ತಾಲೂಕು ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
ನಗರಸಭೆ ವಾರ್ಡ್ ನಂ.೩ರ ವ್ಯಾಪ್ತಿಯಲ್ಲಿ ಕಳೆದ ಸುಮಾರು ೫ ವರ್ಷಗಳಿಂದ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಮಂದಗತಿಯಲ್ಲಿ ಸಾಗುವ ಜೊತೆಗೆ ಕಳಪೆಯಿಂದ ಕೂಡಿದೆ. ಅಲ್ಲದೆ ಸೇತುವೆ ಕಾಮಗಾರಿ ಮೂಲ ನೀಲನಕ್ಷೆಯಂತೆ ಕೈಗೊಳ್ಳದೆ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಒತ್ತಡಕ್ಕೆ ಮಣಿದು ತರಾತುರಿಯಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಕಾಮಗಾರಿಯನ್ನು ಮೂಲ ನೀಲನಕ್ಷೆಯಂತೆ ಸೇತುವೆ ಸಮೀಪದಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಿ ಕೈಗೊಳ್ಳಬೇಕು. ಆದರೆ ಇದೀಗ ತರಾತುರಿಯಲ್ಲಿ ಸೇತುವೆ ರಸ್ತೆಯನ್ನು ಓರೆಯಾಗಿ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ವಾಹನಗಳ ಸಂಚಾರಕ್ಕೆ, ಪಾದಚಾರಿಗಳಿಗೆ ತೊಂದರೆಯಾಗಲಿದೆ. ತಕ್ಷಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ಕಟ್ಟಡಗಳನ್ನು ತೆರವುಗೊಳಿಸಿ ಮೂಲ ನೀಲನಕ್ಷೆಯಂತೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯರಾದ ಜಾರ್ಜ್, ಆರ್. ಮೋಹನ್‌ಕುಮಾರ್, ಉದಯ್‌ಕುಮಾರ್, ಬಸವರಾಜ ಬಿ. ಆನೆಕೊಪ್ಪ, ನಗರಸಭೆ ಮಾಜಿ ಅಧ್ಯಕ್ಷ ಆರ್. ಆರ್. ಕರುಣಾಮೂರ್ತಿ, ಮಾಜಿ ಉಪಾಧ್ಯಕ್ಷೆ ಸಾವಿತ್ರಮ್ಮ ಪುಟ್ಟೇಗೌಡ, ಮಾಜಿ ಸದಸ್ಯರಾದ ಎಂ.ಎ ಅಜಿತ್, ಮೋಹನ್‌ರಾವ್, ಗುಣಶೇಖರ್, ಮಾಜಿ ಉಪಮೇಯರ್ ಮಹಮದ್ ಸನಾವುಲ್ಲಾ, ಪ್ರಮುಖರಾದ ಅಮೋಸ್, ನಕುಲ್, ಗೋಕುಲ್ ಕೃಷ್ಣ, ಪ್ರಕಾಶ್, ಸೈಯದ್ ಅಜ್ಮಲ್, ಧರ್ಮರಾಜ್, ತಬ್ರೇಸ್ ಖಾನ್, ವೆಂಕಟೇಶ್ ಉಜ್ಜನಿಪುರ, ಸೇರಿದಂತೆ ಸ್ಥಳೀಯ ಮುಖಂಡರು, ನಿವಾಸಿಗಳು ಪಾಲ್ಗೊಂಡಿದ್ದರು.
No comments:
Post a Comment