ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಶುಕ್ರವಾರ ಸಂಜೆ ಭದ್ರಾವತಿ ನಗರಸಭೆ ಮುಂಭಾಗದಿಂದ ರಂಗಪ್ಪ ವೃತ್ತದವರೆಗೆ ಜಾಥಾ ಮೂಲಕ ಮತದಾರರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ ಸ್ವೀಪ್ ಕಾರ್ಯಕ್ರಮ ನಡೆಯಿತು.
ಭದ್ರಾವತಿ, ಏ. ೧೪ : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಶುಕ್ರವಾರ ಸಂಜೆ ನಗರಸಭೆ ಮುಂಭಾಗದಿಂದ ರಂಗಪ್ಪ ವೃತ್ತದವರೆಗೆ ಜಾಥಾ ಮೂಲಕ ಮತದಾರರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ ಸ್ವೀಪ್ ಕಾರ್ಯಕ್ರಮ ನಡೆಯಿತು.
ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ರವಿಚಂದ್ರ ನಾಯಕ ನೇತೃತ್ವದಲ್ಲಿ ಮೇಣದ ಬತ್ತಿ ಹಾಗು ಪಂಜು ಬೆಳಗುವ ಮೂಲಕ ಜಾಥಾ ನಡೆಸಿ ಜಾಗೃತಿ ಮತ್ತು ಅರಿವು ಮೂಡಿಸಲಾಯಿತು.
ಜಾಥಾದಲ್ಲಿ ನಗರಸಭೆ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಮತದಾನ ಜಾಗೃತಿ ಮೂಡಿಸುವ ಫಲಕಗಳನ್ನು ಹಿಡಿದು ಸಾಗಿದರು. ತಹಸೀಲ್ದಾರ್ ಸುರೇಶ್ ಆಚಾರ್, ಪೌರಾಯುಕ್ತ ಮನುಕುಮಾರ್, ಪೊಲೀಸ್ ನಗರ ವೃತ್ತ ನಿರೀಕ್ಷಕ ಬಿ.ಪಿ ಶಾಂತಿನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment