ಭದ್ರಾವತಿ, ಏ. ೧೩: ಐಪಿಎಲ್ ಟಿ-೨೦ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಸಂಬಂಧ ಇಬ್ಬರ ವಿರುದ್ಧ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಪೊಲೀಸರು ಏ.೧೧ರಂದು ಸಂಜೆ ೭ ಗಂಟೆ ಸಮಯದಲ್ಲಿ ಕೆ.ಎಚ್ ನಗರ ಬಸ್ ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿ ಮದನ್ ಮತ್ತು ಉಮೇಶ್ ಎಂಬುವರು ಮೊಬೈಲ್ ಮೂಲಕ ಐಪಿಎಲ್ ಟಿ-೨೦ ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
No comments:
Post a Comment