ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆಗೆ ೩ನೇ ದಿನವಾದ ಸೋಮವಾರ ಭದ್ರಾವತಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ನಾಗರಾಜ(ಬಿ.ಎನ್ ರಾಜು) ೨ನೇ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಭದ್ರಾವತಿ, ಏ. ೧೭ : ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆಗೆ ೩ನೇ ದಿನವಾದ ಸೋಮವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ನಾಗರಾಜ(ಬಿ.ಎನ್ ರಾಜು) ೨ನೇ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಮಧ್ಯಾಹ್ನ ಮಿನಿವಿಧಾನಸೌಧ ತಾಲೂಕು ಕಛೇರಿಯಲ್ಲಿ ಬಿ.ಎನ್ ನಾಗರಾಜ ತಾಯಿ ಸರೋಜಮ್ಮ ಹಾಗು ಸಮಿತಿ ಪ್ರಧಾನ ಕಾರ್ಯದರ್ಶಿ ಅಕ್ರಮ್ ಖಾನ್ ಅವರೊಂದಿಗೆ ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ರವಿಚಂದ್ರನಾಯಕ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ್ ಸುರೇಶ್ ಆಚಾರ್ ಉಪಸ್ಥಿತರಿದ್ದರು.
ಬಿ.ಎನ್ ನಾಗರಾಜ ಬಳಿ ೩೦ ಸಾವಿರ ನಗದು:
ಸುಮಾರು ೩೦ ವರ್ಷಗಳಿಂದ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ೫೩ ವರ್ಷದ ಬಿ.ಎನ್ ನಾಗರಾಜ(ಬಿ.ಎನ್ ರಾಜು) ಅವರ ಬಳಿ ೩೦ ಸಾವಿರ ನಗದು ಇದ್ದು, ಬ್ಯಾಂಕ್ ಖಾತೆಯಲ್ಲಿ ೧ ಸಾವಿರ ಹಣವಿದೆ. ಯಾವುದೇ ಆಸ್ತಿ ಹೊಂದಿಲ್ಲ. ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡಿದ್ದಾರೆ.
No comments:
Post a Comment