ಭದ್ರಾವತಿ, ಏ. ೧೯ : ಟಾಟಾ ಯೋಧ ಗೂಡ್ಸ್ ವಾಹನ ಚಾಲಕ ಮುಂದೆ ಚಲಿಸುತಿದ್ದ ವಾಹನ ಹಿಂದಿಕ್ಕಲು(ಓವರ್‌ಟೇಕ್) ಹೋಗಿ ಮುಂದೆ ಬರುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರುವ ಘಟನೆ ನಡೆದಿದೆ.
ನಗರದ ಬೈಪಾಸ್ ರಸ್ತೆಯಲ್ಲಿ ಏ.೧೫ರಂದು ಸಂಜೆ ೫ ಗಂಟೆ ಸಮಯದಲ್ಲಿ ಟಾಟಾ ಯೋಧ ಗೂಡ್ಸ್ ವಾಹನ ಚಾಲಕ ಗಿರೀಶ್ ಅಪಘಾತಪಡಿಸಿದ್ದು, ವಾಹನದಲ್ಲಿ ಉಳಿತುಕೊಂಡಿದ್ದ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡಿದ್ದು, ಮಣಿಪಾಲ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ವಾಹನಗಳು ಜಖಂಗೊಂಡಿವೆ. ಈ ಸಂಬಂಧ ವರಣ್ ಎಂಬುವರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
No comments:
Post a Comment