ಬೆಳ್ಳಿ, ಚಿನ್ನಾಭರಣ ಇನ್ನಿತರ ವಸ್ತುಗಳು ವಶ
ಭದ್ರಾವತಿ ತಾಲೂಕಿನ ಕುಮರಿ ನಾರಾಯಣಪುರ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಮಹಿಳೆಯೋರ್ವಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ಬೆಳ್ಳಿ, ಚಿನ್ನಾಭರಣ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಭದ್ರಾವತಿ, ಏ. ೧೨: ತಾಲೂಕಿನ ಕುಮರಿ ನಾರಾಯಣಪುರ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಮಹಿಳೆಯೋರ್ವಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ಬೆಳ್ಳಿ, ಚಿನ್ನಾಭರಣ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಕುಮರಿ ನಾರಾಯಣಪುರದ ನಿವಾಸಿ ರಂಜಿತಾ(೨೪) ಬಂಧಿತ ಮಹಿಳೆಯಾಗಿದ್ದು, ಈಕೆಯಿಂದ ಒಟ್ಟು ಸುಮಾರು ೪೩ ಸಾವಿರ ರು ಮೌಲ್ಯದ ಬೆಳ್ಳಿ, ಚಿನ್ನಾಭರಣ, ೧ ರೆಫ್ರಿಜರೇಟರ್, ೧ ಬೀರು(ಅಲ್ಮೆರಾ) ಮತ್ತು ೧ ಕುಕ್ಕರ್ ವಶಪಡಿಸಿಕೊಳ್ಳಲಾಗಿದೆ.
ಗ್ರಾಮದ ನಿವಾಸಿ ಹನುಮಂತಪ್ಪ ಎಂಬುವರು ಮಾ.೧೬ರಂದು ಮನೆಗೆ ಬೀಗ ಹಾಕಿಕೊಂಡು ಪತ್ನಿಯೊಂದಿಗೆ ಕೂಲಿ ಕೆಲಸಕ್ಕೆ ಹೋಗಿದ್ದು, ಸಂಜೆ ಮನೆಗೆ ಬಂದಾಗ ಮನೆಯ ಬೀಗ ಮುರಿದು ಬೀರುವಿನದ್ದ ನಗದು, ಆಭರಣ ಕಳ್ಳತನ ಮಾಡಿಕೊಂಡು ಹೋಗಿರುವುದು ಕಂಡು ಬಂದಿದೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿತ್ತು.
ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ ಮತ್ತು ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರಕುಮಾರ್ ದಯಾಮರವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಪಿ.ಐ ಜಿ. ರಮೇಶ್, ಪಿಎಸ್‌ಐ ಶ್ರೀಶೈಲ ಕೆಂಚಣ್ಣನವರ, ಜಯಪ್ಪ ನೇತೃತ್ವದಲ್ಲಿ ಸಿಬ್ಬಂದಿಗಳಾದ ನಾಗರಾಜ್, ಶಿವಪ್ಪ, ಈರಯ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಪ್ರಶಂಸಿದ್ದಾರೆ.
No comments:
Post a Comment