ಜಾನ್‌ಬೆನ್ನಿ, ಕೆ. ಮೋಹನ್ ಮತ್ತು ಮಾರ್ವಿನ್ ಅಕ್ಕಿದಾಸರಿ
ಭದ್ರಾವತಿಯಲ್ಲಿ ವಿಧಾನಸಭಾ ಚುನಾವಣೆಗೆ ೨ನೇ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಾನ್ ಬೆನ್ನಿ ಬುಧವಾರ ನಾಮಪತ್ರ ಸಲ್ಲಿಸಿದರು.
ಭದ್ರಾವತಿ, ಏ. ೧೯: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ೫ನೇ ದಿನವಾದ ಬುಧವಾರ ಒಟ್ಟು ೩ ಮಂದಿ ಪಕ್ಷೇತರರು ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ನಗರಸಭೆ ವ್ಯಾಪ್ತಿಯ ಸಿದ್ದಾಪುರ ನಿವಾಸಿ ಜಾನ್‌ಬೆನ್ನಿ ಬೆಳಿಗ್ಗೆ ಮಿನಿವಿಧಾನಸೌಧ ತಾಲೂಕು ಕಛೇರಿಗೆ ಪತ್ನಿ ಹಾಗು ಕುಮಾರ್, ಗೋಪಾಲ್ ಮತ್ತು ಕೃಪಾದಾನಂ ಅವರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಜಾನ್ ಬೆನ್ನಿ ಆಸ್ತಿ ಮೌಲ್ಯ ೧೭ ಲಕ್ಷ ರು. :
೨ ಬಾರಿಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿರುವ ೫೪ ವರ್ಷ ವಯಸ್ಸಿನ ಜಾನ್ ಬೆನ್ನಿ ಡ್ರೈವಿಂಗ್ ಸ್ಕೂಲ್ ಮಾಲೀಕರಾಗಿದ್ದು, ವಾಯು ಮಾಲಿನ್ಯ ಹೊಗೆ ತಪಾಸಣೆ ಕೇಂದ್ರ ಸಹ ಹೊಂದಿದ್ದಾರೆ. ಸಿದ್ದಾಪುರದಲ್ಲಿ ಒಂದು ಮನೆ, ಇವರ ಹೆಸರಿನಲ್ಲಿ ೪ ಕಾರುಗಳಿದ್ದು, ಇವರ ಬಳಿ ೫೦ ಸಾವಿರ ರು. ನಗದು, ವಿವಿಧ ಬ್ಯಾಂಕ್ ಖಾತೆಗಳಲ್ಲಿ ಒಟ್ಟು ೮೪,೭೯೭ ರು. ಹೊಂದಿದ್ದಾರೆ. ಅಲ್ಲದೆ ೭೦ ಗ್ರಾಂ ಚಿನ್ನಾಭರಣವಿದೆ. ಒಟ್ಟು ೧೭,೨೨,೦೦೦ ರು. ಆಸ್ತಿ ಮೌಲ್ಯ ಹೊಂದಿದ್ದಾರೆ. ಇವರ ದ್ವಿತೀಯ ಪಿಯುಸಿ ವಿಜ್ಞಾನ ವ್ಯಾಸಂಗ ಮಾಡಿದ್ದಾರೆ.
ನಗರದ ಹೊಸೇತುವೆ ರಸ್ತೆಯಲ್ಲಿರುವ ಶ್ರೀ ಮಂಜುನಾಥ ಸಾಮಿಲ್ ನಿವಾಸಿ ಕೆ. ಮೋಹನ್ ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಿ. ರಮೇಶ್, ಗಣೇಶ್, ಹೇಮಂತ್ ಕುಮಾರ್ ಉಪಸ್ಥಿತರಿದ್ದರು.
ಕೆ. ಮೋಹನ್ ಪಿಯುಸಿ ವಿದ್ಯಾಭ್ಯಾಸ :
ಕೆ. ಮೋಹನ್ ಅವರ ಕುಟುಂಬದ ಆಸ್ತಿಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಈ ಹಿನ್ನಲೆಯಲ್ಲಿ ಯಾವುದೇ ಆಸ್ತಿ ವಿವರ ನಮೂದಿಸಿಲ್ಲ. ಕೆ. ಮೋಹನ್ ಪಿಯುಸಿ ವಿದ್ಯಾಭ್ಯಾಸ ಹೊಂದಿದ್ದು, ಇಬ್ಬರು ಮಕ್ಕಳನ್ನು ಹೊಂದಿದ್ದಾರೆ.
ಉಳಿದಂತೆ ಮಾರ್ವಿನ್ ಅಕ್ಕಿದಾಸರಿ ಎಂಬುವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ರವಿಚಂದ್ರನಾಯಕ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿ ಸುರೇಶ್ ಆಚಾರ್ ಉಪಸ್ಥಿತರಿದ್ದರು.
ಭದ್ರಾವತಿಯಲ್ಲಿ ವಿಧಾನಸಭಾ ಚುನಾವಣೆಗೆ ಮೊದಲ ಬಾರಿಗೆ ಸ್ಪರ್ಧಿಕಿ ಕೆ. ಮೋಹನ್ ನಾಮಪತ್ರ ಸಲ್ಲಿಸಿದರು.
No comments:
Post a Comment