ಭದ್ರಾವತಿ, ಏ. 4 : ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಲೋಕ ಕಲ್ಯಾಣಾರ್ಥ ಸಾಮೂಹಿಕ ಶ್ರೀ ಮಹಾಚಂಡಿಕಯಾಗ ವಿಜೃಂಭಣೆಯಿಂದ ಜರುಗಿತು.
ಶ್ರೀ ಕ್ಷೇತ್ರದಲ್ಲಿ ಶ್ರೀ ದುರ್ಗಾದೇವಿ ಪ್ರತಿಮೆ ಪ್ರತಿಷ್ಠಾಪನೆ ೧೨ನೇ ವರ್ಷದ ಅಂಗವಾಗಿ ಶ್ರೀ ಮಹಾಚಂಡಿಕಯಾಗ ಹಮ್ಮಿಕೊಳ್ಳಲಾಗಿತ್ತು, ಮಧ್ಯಾಹ್ನ ೧೨.೩೦ಕ್ಕೆ ಪೂರ್ಣಾಹುತಿ ಹಾಗು ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಿತು.
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಭಕ್ತಾಧಿಗಳು ಸಾಮೂಹಿಕ ಶ್ರೀ ಮಹಾಚಂಡಿಕಯಾಗದಲ್ಲಿ ಪಾಲ್ಗೊಂಡು ಅಮ್ಮನವರ ಕೃಪೆಗೆ ಪಾತ್ರರಾದರು.
ದೇವಸ್ಥಾನ ಸಮಿತಿ ಅಧ್ಯಕ್ಷ ಎ. ಚಂದ್ರಘೋಷನ್ ಸೇರಿದಂತೆ ಪದಾಧಿಕಾರಿಗಳು, ಸೇವಾಕರ್ತರು ಉಪಸ್ಥಿತರಿದ್ದರು.
No comments:
Post a Comment