ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭದ್ರಾವತಿ ನಗರಸಭೆ ವತಿಯಿಂದ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.
ಭದ್ರಾವತಿ, ಏ. ೨೫ : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.
ನಗರಸಭೆ ವತಿಯಿಂದ ಹಲವು ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆ ಸಂಬಂಧ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸುವ ಜೊತೆಗೆ ಮತದಾನ ಪ್ರತಿಜ್ಞಾ ವಿಧಿ ನಡೆಸಲಾಯಿತು.
ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಎಂ. ಸುಹಾಸಿನಿ, ಸಂಘಟಕರಾದ ಎಂ. ಈಶ್ವರಪ್ಪ, ಸುಮಿತ್ರ ಎಚ್. ಹರಪ್ಪನಹಳ್ಳಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment