ಭದ್ರಾವತಿಯಲ್ಲಿ ವಿಧಾನಸಭಾ ಚುನಾವಣೆಗೆ ಸಂಯುಕ್ತ ಕರ್ನಾಟಕ ಜನತಾದಳ(ಜೆಡಿಯು) ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನಾಮಪತ್ರ ಸಲ್ಲಿಸಿದರು.
ಭದ್ರಾವತಿ, ಏ. ೧೯ : ವಿಧಾನಸಭಾ ಚುನಾವಣೆಗೆ ಸಂಯುಕ್ತ ಕರ್ನಾಟಕ ಜನತಾದಳ(ಜೆಡಿಯು) ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನಾಮಪತ್ರ ಸಲ್ಲಿಸಿದರು.
ಶಶಿಕುಮಾರ್ ಎಸ್ ಗೌಡ್‌ರವರು ಬೆಳಿಗ್ಗೆ ಮಿನಿವಿಧಾನಸೌಧ ತಾಲೂಕು ಕಛೇರಿಗೆ ತೆರಳಿ ಚುನಾವಣಾಧಿಕಾರಿ ರವಿಚಂದ್ರನಾಯಕರವರಿಗೆ ನಾಮಪತ್ರ ಸಲ್ಲಿಸಿದರು.
ಜೆಡಿಯು ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಬು ದೀಪಕ್ ಕುಮಾರ್, ತಾಲೂಕು ಘಟಕದ ಅಧ್ಯಕ್ಷ ರಘು ಸಂಕ್ಲಿಪುರ, ದಿವ್ಯಶ್ರೀ ಶಶಿಕುಮಾರ್ ಎಸ್ ಗೌಡ ಉಪಸ್ಥಿತರಿದ್ದರು.
ಕೊಳಚೆ ಪ್ರದೇಶದ ನಿವಾಸಿ ಶಶಿಕುಮಾರ್ :
ಸುಮಾರು ೪೧ ವರ್ಷ ವಯಸ್ಸಿನ ಜನ್ನಾಪುರ ಹಾಲಪ್ಪ ಶೆಡ್ ಕೊಳಚೆ ಪ್ರದೇಶದ ನಿವಾಸಿ ಶಶಿಕುಮಾರ್ ಎಸ್. ಗೌಡ ೨ನೇ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದಾರೆ. ಹಲವಾರು ವರ್ಷಗಳಿಂದ ಕೊಳಚೆ ಪ್ರದೇಶದಲ್ಲಿ ವಾಸವಿದ್ದರೂ ಇನ್ನೂ ಹಕ್ಕುಪತ್ರ ನೀಡಿಲ್ಲ. ಈ ಹಿನ್ನಲೆಯಲ್ಲಿ ಇವರ ಹೆಸರಿನಲ್ಲಿ ಸ್ವಂತ ಮನೆ ಇಲ್ಲ. ಇಬ್ಬರು ಮಕ್ಕಳಿದ್ದು, ಇವರು ೫೦ ಸಾವಿರ ರು. ನಗದು ಹೊಂದಿದ್ದಾರೆ. ಬ್ಯಾಂಕ್ ಖಾತೆಯಲ್ಲಿ ೧ ಸಾವಿರು ರು. ಹಣವಿದ್ದು, ಉಳಿದಂತೆ ಯಾವುದೇ ನಿವೇಶನ, ಜಮೀನು ಹೊಂದಿಲ್ಲ. ಇವರ ಬಳಿ ಸುಮಾರು ೨೫ ಗ್ರಾಂ ಚಿನ್ನಾಭರಣವಿದೆ. ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡಿದ್ದಾರೆ.
No comments:
Post a Comment