ಭದ್ರಾವತಿ ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸವಾಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್(ಕೆಪಿಸಿ)ಬಿ.ಆರ್ ಪ್ರಾಜೆಕ್ಟ್ ನಿವೃತ್ತ ಅಭಿಯಂತರ, ಹಿರಿಯ ಸಾಹಿತಿ ಹೊಸಳ್ಳಿ ದಾಳೇಗೌಡ ಅವರನ್ನು ಸೋಮವಾರ ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.
ಭದ್ರಾವತಿ, ಏ. ೩: ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸವಾಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್(ಕೆಪಿಸಿ)ಬಿ.ಆರ್ ಪ್ರಾಜೆಕ್ಟ್ ನಿವೃತ್ತ ಅಭಿಯಂತರ, ಹಿರಿಯ ಸಾಹಿತಿ ಹೊಸಳ್ಳಿ ದಾಳೇಗೌಡ ಅವರನ್ನು ಸೋಮವಾರ ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.
ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನ ಏ.೧೬ರ ಭಾನುವಾರ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಮುಂಭಾಗದಲ್ಲಿರುವ ಶ್ರೀ ರಾಮ ಸಮುದಾಯ ಭವನದಲ್ಲಿ ನಡೆಯಲಿದ್ದು, ಹೊಸಳ್ಳಿ ದಾಳೇಗೌಡರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ನೇತೃತ್ವದಲ್ಲಿ ತಾಲೂಕು ಘಟಕದ ಪ್ರಮುಖರು ಬಿ.ಆರ್ ಪ್ರಾಜೆಕ್ಟ್‌ನಲ್ಲಿರುವ ಹೊಸಳ್ಳಿ ದಾಳೇಗೌಡರ ನಿವಾಸಕ್ಕೆ ತೆರಳಿ ಅವರನ್ನು ಸನ್ಮಾನಿಸಿ ಆಹ್ವಾನಿಸಲಾಯಿತು.
ಪರಿಷತ್ ಜಿಲ್ಲಾ ಕಾರ್ಯದರ್ಶಿ ಎಂ.ಎಂ ಸ್ವಾಮಿ, ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕಾರ್ಯದರ್ಶಿ ಟಿ. ತಿಮ್ಮಪ್ಪ, ಸಂಘಟನಾ ಕಾರ್ಯದರ್ಶಿ ಬಿ. ಕಮಲಾಕರ್, ಕೋಶಾಧ್ಯಕ್ಷ ನಾಗೋಜಿ ರಾವ್, ಕೆ.ಟಿ ಪ್ರಸನ್ನ, ಹೇಮಾವತಿ ವಿಶ್ವನಾಥ್, ಅನ್ನಪೂರ್ಣ ಸತೀಶ್, ಜಯಂತಿ ನಾಗರಾಜ್‌ಶೇಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment