ಲೋಹಿತಾ ನಂಜಪ್ಪ
ಭದ್ರಾವತಿ, ಏ. ೩೦: ನಗರಸಭೆ ವಾರ್ಡ್ ನಂ.೨೯ರ ಜನ್ನಾಪುರ ನಿವಾಸಿ, ನ್ಯಾಯವಾದಿ ಬಿ.ಜಿ ಲೋಹಿತಾ ನಂಜಪ್ಪ(೫೬) ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ, ಪುತ್ರ ಕಾರ್ತಿಕ್ ಹಾಗು ಓರ್ವ ಪುತ್ರಿ, ಸೊಸೆ ಮತ್ತು ಮೊಮ್ಮಕ್ಕಳು ಇದ್ದರು. ಮೈಸೂರಿನಲ್ಲಿ ಮದುವೆ ಸಮಾರಂಭಕ್ಕೆ ತೆರಳಿ ಹಿಂದಿರುಗುತ್ತಿದ್ದಾಗ ಮಾರ್ಗಮಧ್ಯೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ನ್ಯಾಯವಾದಿ ದಿವಂಗತ ಎ.ಬಿ ನಂಜಪ್ಪನವರ ಪತ್ನಿಯಾಗಿದ್ದ ಬಿ.ಜಿ ಲೋಹಿತಾ ಪ್ರಸ್ತುತ ನೋಟರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಹಳೇನಗರ ಮಹಿಳಾ ಸೇವಾ ಸಮಾಜದಲ್ಲಿ ಈ ಹಿಂದೆ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ನಿರ್ದೇಶಕಿಯಾಗಿದ್ದರು. ನಗರಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಪ್ರಸ್ತುತ ಬ್ಲಾಕ್ ಕಾಂಗ್ರೆಸ್ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ತಾಲೂಕು ಅಧ್ಯಕ್ಷರಾಗಿದ್ದರು.
ಮೃತರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಲಯನ್ಸ್ ಕ್ಲಬ್, ಹಳೇನಗರ ಸೇವಾ ಸಮಾಜ, ಬ್ಲಾಕ್ ಕಾಂಗ್ರೆಸ್ ಸಮಿತಿ, ಕಾರುಣ್ಯ ಚಾರಿಟಬಲ್ ಟ್ರಸ್ಟ್ ಹಾಗು ಒಕ್ಕಲಿಗ ಸಮಾಜದ ಮುಖಂಡರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment