ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜನ್ಮದಿನ ಏ.೧೪ರಂದು ನಗರದಲ್ಲಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್ ಹೇಳಿದರು.
ಭದ್ರಾವತಿ, ಏ. ೧೦ : ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜನ್ಮದಿನ ಏ.೧೪ರಂದು ನಗರದಲ್ಲಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್ ಹೇಳಿದರು.
ಅಂಬೇಡ್ಕರ್‌ರವರು ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತರಾದ ವ್ಯಕ್ತಿಯಾಗಿಲ್ಲ. ಸಂವಿಧಾನ ರಚಿಸುವ ಮೂಲಕ ಈ ದೇಶಕ್ಕೆ ಸದೃಢವಾದ ಪ್ರಜಾಪ್ರಭುತ್ವ ವ್ಯವಸ್ಥೆ ರೂಪಿಸಿ ಕೊಟ್ಟಿದ್ದಾರೆ. ಚುನಾವಣೆ ನೀತಿ ಸಂಹಿತೆ ನೆಪದಲ್ಲಿ ಇವರ ಜನ್ಮದಿನ ಆಚರಣೆ ಮೊಟಕುಗೊಳಿಸುವುದು ಸರಿಯಲ್ಲ ಎಂದರು.
ರಾಜಕೀಯ ಹೊರಗಿಟ್ಟು ನಗರದ ಎಲ್ಲಾ ಪ್ರಗತಿಪರ ಸಂಘಟನೆಗಳು ಒಗ್ಗಟ್ಟಾಗಿ ಅಂಬೇಡ್ಕರ್‌ರವರ ಜನ್ಮದಿನ ಆಚರಿಸುತ್ತಿದ್ದು, ಅಂದು ಬೆಳಿಗ್ಗೆ ೧೦.೩೦ಕ್ಕೆ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬೈಕ್ ರ‍್ಯಾಲಿ ನಡೆಸಲಾಗುವುದು. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ಮಂಜುನಾಥ್, ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಜಗದೀಶ್, ತೆಲುಗು ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಭಾಸ್ಕರ್ ಬಾಬು, ಮೋಚಿ ಮಹಿಳಾ ಸಮಾಜದ ಅಧ್ಯಕ್ಷೆ ರೇಖಾ, ಕನ್ನಡ ರಕ್ಷಣಾ ವೇದಿಕೆ ಮುರುಳಿ, ಪ್ರಮುಖರಾದ ಚಂದ್ರಶೇಖರ್, ರಾಜೇಂದ್ರ, ಬಿ. ರಮೇಶ್, ಸಿ. ಜಯಪ್ಪ, ಈ.ಪಿ ಬಸವರಾಜ್, ದೇವದಾನಂ, ಐಸಾಕ್ ಲಿಂಕನ್, ಜಗದೀಶ್, ಟಿ. ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment