ಭದ್ರಾವತಿಯಲ್ಲಿ ವಿಧಾನಸಭಾ ಚುನಾವಣೆಗೆ ೬ನೇ ಬಾರಿಗೆ ಸ್ಪರ್ಧಿಸಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಪರ ವ್ಯಾಪಕ ಪ್ರಚಾರಕ್ಕೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಮುಂದಾಗಿದ್ದು, ಪ್ರಚಾರ ಕಾರ್ಯಕ್ಕೆ ಬಳಸುತ್ತಿರುವ ವಾಹನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಭದ್ರಾವತಿ, ಏ. ೨೧ : ವಿಧಾನಸಭಾ ಚುನಾವಣೆಗೆ ೬ನೇ ಬಾರಿಗೆ ಸ್ಪರ್ಧಿಸಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಪರ ವ್ಯಾಪಕ ಪ್ರಚಾರಕ್ಕೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಮುಂದಾಗಿದ್ದು, ಪ್ರಚಾರ ಕಾರ್ಯಕ್ಕೆ ಬಳಸುತ್ತಿರುವ ವಾಹನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಸಂಗಮೇಶ್ವರ್ ನಿವಾಸದಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಚಾಲನೆ ನೀಡುವ ಮೂಲಕ ಚುನಾವಣೆ ಪ್ರಚಾರ ಕಾರ್ಯ ಯಶಸ್ವಿಯಾಗಿ ಕೈಗೊಳ್ಳುವಂತೆ ಕರೆ ನೀಡಲಾಯಿತು.
ಎಸ್. ಅರುಣ್‌ಕುಮಾರ್ ಮತ್ತು ಎಂ. ರಾಜೇಂದ್ರ ನೇತೃತ್ವದಲ್ಲಿ ಪ್ರಚಾರ ಕಾರ್ಯ ಆರಂಭಿಸಲಾಗಿದ್ದು, ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಪ್ರಮುಖರಾದ ಎಚ್. ರವಿಕುಮಾರ್, ಅಂತೋಣಿ ವಿಲ್ಸನ್, ರಾಜೇಂದ್ರ, ರವಿಕುಮಾರ್, ವರುಣ್‌ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment