ಭದ್ರಾವತಿ ಶುಕ್ರವಾರ ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಪ್ರಮುಖರನ್ನು ಸ್ವಾಗತಿಸಿ ಅಭಿನಂದಿಸುವ ಮೂಲಕ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಭದ್ರಾವತಿ, ಏ. ೨೧ : ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಕ್ಷ ಸಂಘಟನೆ ಜೊತೆಗೆ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದು ಶಾರದ ಅಪ್ಪಾಜಿ ಮನವಿ ಮಾಡಿದರು.
ಅವರು ಶುಕ್ರವಾರ ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಪ್ರಮುಖರನ್ನು ಸ್ವಾಗತಿಸಿ ಅಭಿನಂದಿಸುವ ಮೂಲಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳು, ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ವಿವಿಧ ಪಕ್ಷಗಳಿಂದ ಸೇರ್ಪಡೆಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಸಂಘಟನೆಗೆ ಹೆಚ್ಚಿನ ಗಮನ ನೀಡಬೇಕು. ಈ ಬಾರಿ ಗೆಲುವಿಗೆ ಎಲ್ಲರೂ ಒಗ್ಗಟ್ಟಿಗಾಗಿ ಶಕ್ತಿ ಮೀರಿ ಶ್ರಮಿಸಬೇಕೆಂದರು.
ಪಕ್ಷಕ್ಕೆ ಸೇರ್ಪಡೆಗೊಂಡ ಮಹಮದ್ ಸನ್ನಾವುಲ್ಲಾ, ಇಬ್ರಾಹಿಂ ಖಾನ್ ಮತ್ತು ಎನ್. ಕೃಷ್ಣಪ್ಪರವರನ್ನು ಅಭಿನಂದಿಸಲಾಯಿತು. ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಸೂಧನ್, ಪ್ರಮುಖರಾದ ಡಿ.ಟಿ ಶ್ರೀಧರ್, ಮುರ್ತುಜಾಖಾನ್, ಸೈಯದ್ ಅಜ್ಮಲ್, ಎ. ಮಸ್ತಾನ್, ಮುಕ್ರಮ್ ಖಾನ್, ತರುಣ್‌ಕುಮಾರ್, ಲೋಕೇಶ್ವರ್‌ರಾವ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
No comments:
Post a Comment