ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪೊಲೀಸರಿಗೆ ದೂರು
ಭದ್ರಾವತಿ, ಏ. ೪ : ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ಇಲಾಖೆಗೆ ನಿಮ್ಮ ವಿರುದ್ಧ ದೂರು ಬಂದಿದ್ದು, ನಿಮ್ಮನ್ನು ಪ್ರಕರಣದಿಂದ ಪಾರು ಮಾಡಲು ಹಣ ನೀಡುವಂತೆ ವ್ಯಕ್ತಿಯೋರ್ವ ಶಿಶು ಅಭಿವೃದ್ಧಿ ಯೋಜನಾಧಿಕಾರಿ(ಸಿಡಿಪಿಓ)ಗೆ ಕರೆ ಮಾಡಿ ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ. ಈ ಹಿನ್ನಲೆಯಲ್ಲಿ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ವ್ಯಕ್ತಿಯೋರ್ವ ನಾನು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎಂದು ಹೇಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್‌ರವರಿಗೆ ಮೊಬೈಲ್ ಮೂಲಕ ಕರೆ ಮಾಡಿದ್ದು, ಅಂಗನವಾಡಿ ಆಹಾರ ವಿತರಣೆಯಲ್ಲಿ ಹಗರಣ ನಡೆದಿರುವ ಬಗ್ಗೆ ನಿಮ್ಮ ವಿರುದ್ಧ ದೂರು ಬಂದಿದೆ. ಈ ಹಿನ್ನಲೆಯಲ್ಲಿ ಇಲಾಖೆ ವಿಚಾರಣಾಧಿಕಾರಿಗಳು ಬೆಂಗಳೂರಿನಿಂದ ಬರುತ್ತಿದ್ದಾರೆ. ನಿಮ್ಮನ್ನು ಪಾರು ಮಾಡಲು ೧.೨೦ ಲಕ್ಷ ರು. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ.
ನಿರಂತರವಾಗಿ ಕರೆ ಮಾಡಿ ಮಾನಸಿಕವಾಗಿ ಕಿರುಕುಳ ನೀಡಿದ್ದು, ಇದರಿಂದ ಅನುಮಾನಗೊಂಡ ಸುರೇಶ್‌ರವರು ಕರೆ ಮಾಡಿರುವ ವ್ಯಕ್ತಿ ಕುರಿತು ಮಾಹಿತಿ ತಿಳಿದುಕೊಂಡಿದ್ದಾರೆ. ಆತ ನಕಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎಂಬುದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
No comments:
Post a Comment