ಭದ್ರಾವತಿ ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನ ಏ.೧೬ರ ಭಾನುವಾರ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಮುಂಭಾಗದಲ್ಲಿರುವ ಶ್ರೀ ರಾಮ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಭದ್ರಾವತಿ, ಏ. ೧೧: ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನ ಏ.೧೬ರ ಭಾನುವಾರ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಮುಂಭಾಗದಲ್ಲಿರುವ ಶ್ರೀ ರಾಮ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು.
ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನಾಧ್ಯಕ್ಷರಾಗಿ ತಾಲೂಕಿನ ಬಿಆರ್‌ಪಿ ನಿವಾಸಿ ಹಿರಿಯ ಸಾಹಿತಿ ಹೊಸಹಳ್ಳಿ ದಾಳೇಗೌಡರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನ ಯಶಸ್ವಿಗೆ ಸ್ವಾಗತ ಸಮಿತಿ, ಹಣಕಾಸು ಸಮಿತಿ, ವೇದಿಕೆ ಸಮಿತಿ, ಮೆರವಣಿಗೆ ಸಮಿತಿ, ನೋಂದಣಿ ಸಮಿತಿ, ಪ್ರಚಾರ ಸಮಿತಿ, ಆಹಾರ ಸಮಿತಿ ಮತ್ತು ಸತ್ಕಾರ ಸಮಿತಿಗಳನ್ನು ರಚನೆ ಮಾಡಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, ೯.೩೦ಕ್ಕೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ನಾಡದೇವಿ ಭುವನೇಶ್ವರಿ ಹಾಗು ಸರ್ವಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ನಗರಸಭೆ ಪೌರಾಯುಕ್ತ ಮನುಕುಮಾರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
೧೦.೩೦ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ನಿಟ್ಟೂರು ಹಿರಿಯ ಸಾಹಿತಿ ಡಾ. ಶಾಂತರಾಮ್‌ಪ್ರಭು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಆಶಯ ನುಡಿಗಳನ್ನಾಡಲಿದ್ದು, ಸಮ್ಮೇಳನಾಧ್ಯಕ್ಷ ಹೊಸಹಳ್ಳಿ ದಾಳೇಗೌಡ ಮತ್ತು ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಎ.ಪಿ ಕುಮಾರ್ ಉಪಸ್ಥಿತರಿರುವರು.
ಕುವೆಂಪು ವಿಶ್ವವಿದ್ಯಾನಿಲಯ ಉಪಕುಲಪತಿ ಬಿ.ಪಿ ವೀರಭದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಲೋಕೋಪಯೋಗಿ ಇಲಾಖೆ ಅಭಿಯಂತರ ಬಿ.ಆರ್ ದಯಾನಂದ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಭದ್ರಾವತಿ ಸತ್ಯ, ಉದ್ಯಮಿ ಎ. ಮಾಧು, ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಮತ್ತು ಪರಿಷತ್ ಹಿರಿಯೂರು ಹೋಬಳಿ ಘಟಕದ ಅಧ್ಯಕ್ಷ ಎಚ್.ಬಿ ಸಿದ್ದೋಜಿರಾವ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ದೇವರಹಳ್ಳಿ ಕಾ.ನಾ ರಂಗನಾಥ್‌ರವರ ಪುಸ್ತಕ ಬಿಡುಗಡೆಗೊಳ್ಳಲಿದೆ ಎಂದರು.
ಭದ್ರಾವತಿಯ-ಬದುಕಿನ ತಲ್ಲಣಗಳು ವಿಚಾರ ಕುರಿತ ಗೋಷ್ಠಿ-೧, ಸಮ್ಮೇಳನಾಧ್ಯಕ್ಷರ ಬದುಕು ಬರಹ ಕುರಿತ ಗೋಷ್ಠಿ-೨ ಮತ್ತು ಕವಿಗೋಷ್ಠಿ ಗೋಷ್ಠಿ-೩ ನಡೆಯಲಿದೆ. ಸಂಜೆ ೫.೩೦ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಬೆಂಗಳೂರಿನ ಹಿರಿಯ ಕವಿ ಎಚ್. ದುಂಡಿರಾಜ್ ಸಮಾರೋಪ ನುಡಿಗಳನ್ನಾಡಲಿದ್ದಾರೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ ಅಧ್ಯಕ್ಷತೆ ವಹಿಸಲಿದ್ದು, ಸಮಾಜ ಸೇವಕ ಸಿ. ಮಹೇಶ್‌ಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಕೋಗಲೂರು ತಿಪ್ಪೇಸ್ವಾಮಿ, ನಗರಸಭೆ ಕಂದಾಯಾಧಿಕಾರಿ ಎಂ.ಎಸ್ ರಾಜ್‌ಕುಮಾರ್, ರಮೇಶ್, ಶಿವಕುಮಾರ್, ಕೆ.ಎಸ್ ರೇವಪ್ಪ ಮತ್ತು ಸಿ. ಜಯಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನಾಧ್ಯಕ್ಷ ಹೊಸಹಳ್ಳಿ ದಾಳೇಗೌಡ, ಪ್ರಮುಖರಾದ ಕೋಡ್ಲು ಯಜ್ಞಯ್ಯ, ಎಚ್. ತಿಮ್ಮಪ್ಪ, ಎಂ.ಈ ಜಗದೀಶ್, ಎಂ.ಎಸ್ ಸುಧಾಮಣಿ, ಬಿ. ಕಮಲಾಕರ್, ಡಿ. ನಾಗೋಜಿರಾವ್, ಕೆ.ಎಸ್ ರೇವಪ್ಪ, ಬಿ.ಎಚ್ ಪ್ರಶಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment