ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷದ ತಾಲೂಕು ಮಂಡಲ ವತಿಯಿಂದ ಗುರುವಾರ ಪಕ್ಷದ ಕಛೇರಿಯಲ್ಲಿ ಬೂತ್ ಪ್ರಭಾರಿಗಳ ಸಭೆ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಭದ್ರಾವತಿ, ಏ. ೧೩: ಭಾರತೀಯ ಜನತಾ ಪಕ್ಷ ವಿಧಾನಸಭಾ ಚುನಾವಣೆಗೆ ಈಗಾಗಲೇ ಕ್ಷೇತ್ರದಲ್ಲಿ ನ್ಯಾಯವಾದಿ, ಯುವ ಮುಖಂಡ ಮಂಗೋಟೆ ರುದ್ರೇಶ್ ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಪಕ್ಷದ ತಾಲೂಕು ಮಂಡಲ ರುದ್ರೇಶ್ ಗೆಲುವಿಗಾಗಿ ಪೂರ್ವ ಸಿದ್ದತೆಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುತ್ತಿದೆ.
ರುದ್ರೇಶ್‌ರವರ ಆಯ್ಕೆಗೆ ಸಂಬಂಧಿಸಿದಂತೆ ಇದುವರೆಗೂ ಕ್ಷೇತ್ರದಲ್ಲಿ ಯಾವುದೇ ಗೊಂದಲಗಳು ಕಂಡು ಬಂದಿಲ್ಲ. ಈ ಬಾರಿ ಚುನಾವಣೆಯಲ್ಲಿ ಎಲ್ಲರೂ ಸಹ ಒಗ್ಗಟ್ಟಿನಿಂದ ಗೆಲುವಿಗಾಗಿ ಶ್ರಮಿಸಲು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಗುರುವಾರ ಬೂತ್ ಪ್ರಭಾರಿಗಳ ಸಭೆ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಸಭೆ ಆರಂಭದಲ್ಲಿ ಅಭ್ಯರ್ಥಿ ರುದ್ರೇಶ್‌ರವರಿಗೆ ಶುಭಕೋರಲಾಯಿತು. ಚುನಾವಣಾ ಪ್ರಭಾರಿ ಅಶೋಕ್‌ಮೂರ್ತಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಆರ್.ಎಸ್ ಶೋಭಾ, ಮಂಡಲ ಕಾರ್ಯದರ್ಶಿ ಚನ್ನೇಶ್, ಕ್ಷೇತ್ರ ಚುನಾವಣಾ ಸಂಚಾಲಕ ಎಂ. ಮಂಜುನಾಥ್, ಸಹ ಸಂಚಾಲಕ ಎಂ.ಎಸ್ ಸುರೇಶಪ್ಪ ಹಾಗೂ ಬೂತ್ ಪ್ರಭಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರು.ಸಭೆಯಲ್ಲಿ ಉಪಸ್ಥಿತರಿದ್ದರು.
No comments:
Post a Comment