ಸುಮಿತ್ರ ಬಾಯಿ
ಭದ್ರಾವತಿ, ಏ. ೮ : ರಾಜ್ಯ ವಿಧಾನಸಭಾ ಚುನಾವಣೆಗೆ ರವಿ ಕೃಷ್ಣಾ ರೆಡ್ಡಿ ನೇತೃತ್ವದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕ್ಷೇತ್ರದಿಂದ ಸ್ಪರ್ಧಿಸಲು ಸುಮಿತ್ರ ಬಾಯಿಯವರಿಗೆ ಅವಕಾಶ ಲಭಿಸಿದೆ.
ಉಜ್ಜನಿಪುರ ಶಂಕ್ರಪ್ಪ ಕಟ್ಟೆ ಕೆರೆ ಸಮೀಪ ತೋಟದ ಮನೆ ನಿವಾಸಿ ಸುಮಿತ್ರ ಬಾಯಿ ಸಾಮಾನ್ಯ ಕುಟುಂಬಕ್ಕೆ ಸೇರಿದ್ದು, ಇವರು ಹಲವಾರು ವರ್ಷಗಳಿಂದ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಇವರ ಪತಿ ನಾಗರಾಜ್‌ರಾವ್ ಸಿಂಧೆ ಎಂಪಿಎಂ ನಿವೃತ್ತ ಕಾರ್ಮಿಕರಾಗಿದ್ದು, ಪ್ರಸ್ತುತ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಸಹ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಗುರುತಿಸಿಕೊಂಡಿದ್ದಾರೆ.
ಈ ಬಾರಿ ಚುನಾವಣೆಗೆ ಪಕ್ಷದಿಂದ ಸ್ಪರ್ಧಿಸಲು ೩-೪ ಆಕಾಂಕ್ಷಿಗಳು ಪೈಪೋಟಿಗೆ ಮುಂದಾಗಿದ್ದರು. ಪಕ್ಷದ ರಾಜ್ಯ ಚುನಾವಣಾ ಸಮಿತಿ ಸುಮಿತ್ರ ಬಾಯಿಯವರನ್ನು ಆಯ್ಕೆ ಮಾಡಿದೆ.
ಪಕ್ಷದ ವತಿಯಿಂದ ಈಗಾಗಲೇ ಕಳೆದ ಸುಮಾರು ೬ ತಿಂಗಳಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ಕೈಗೊಳ್ಳಲಾಗಿದ್ದು, ಅಲ್ಲದೆ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ಸಹ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡುವುದಾಗಿ ಪಕ್ಷದ ವರಿಷ್ಠರು ಈ ಹಿಂದೆ ಭರವಸೆ ನೀಡಿದ್ದರು. ಇದಕ್ಕೆ ಪೂರಕವೆಂಬಂತೆ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ವಿಶೇಷವಾಗಿದೆ.
No comments:
Post a Comment