ಚುನಾವಣಾ ಆಯೋಗದ ಆದೇಶದ ಹಿನ್ನಲೆಯಲ್ಲಿ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಸೂಚನೆ ಮೇರೆಗೆ ಭದ್ರಾವತಿ ನಗರಸಭೆ ವತಿಯಿಂದ ಭಾನುವಾರ 'ನಮ್ಮ ನಡೆ ಮತಗಟ್ಟೆಯ ಕಡೆ' ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಏ. ೩೦ : ಚುನಾವಣಾ ಆಯೋಗದ ಆದೇಶದ ಹಿನ್ನಲೆಯಲ್ಲಿ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಸೂಚನೆ ಮೇರೆಗೆ ನಗರಸಭೆ ವತಿಯಿಂದ ಭಾನುವಾರ 'ನಮ್ಮ ನಡೆ ಮತಗಟ್ಟೆಯ ಕಡೆ' ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಮತದಾರರಿಗೆ ಮತದಾನ ಹಾಗು ತಮ್ಮ ಮತಗಟ್ಟೆ ಕುರಿತು ಜಾಗೃತಿ ಮೂಡಿಸಲು ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಏಕಕಾಲಕ್ಕೆ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಾಥಾ ಆರಂಭಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಈ ಬಾರಿ ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ವಿನೂತನವಾದ ವಿಶೇಷ ಧ್ವಜಾ ರೂಪಿಸಿದ್ದು, ಪೌರಾಯುಕ್ತ ಮನುಕುಮಾರ್ ಧ್ವಜಾರೋಹಣಗೊಳಿಸಿದರು.
ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್, ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಲಿಂಗೇಗೌಡ, ಕರಣ್‌ಸಿಂಗ್, ಹಳೇ ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಎಜುಕೇಷನ್ ಟ್ರಸ್ಟ್ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ(ಬಿ.ಇಡಿ) ಪ್ರಾಂಶುಪಾಲರು ಮತ್ತು ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.
No comments:
Post a Comment