ಭದ್ರಾವತಿ, ಏ. ೧೦: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬರು ಅಕ್ರಮವಾಗಿ ಮದ್ಯಪಾನಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ರಂಗನಾಥ ಅಂತರಗಟ್ಟಿರವರ ನೇತೃತ್ವದ ತಂಡ ಏ.೮ರ ಬೆಳಿಗ್ಗೆ ೧೧ ಗಂಟೆ ಸಮಯದಲ್ಲಿ ದಾಳಿ ನಡೆಸಿದ್ದು, ಮದ್ಯ ತುಂಬಿದ ೨೧ ಪೌಚ್‌ಗಳನ್ನು, ೧ ಖಾಲಿ ಪೌಚ್ ಮತ್ತು ೩ ಮದ್ಯಪಾನ ಮಾಡಲು ಬಳಸಿದ ಪ್ಲಾಸ್ಟಿಕ್ ಲೋಟಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment