Monday, May 8, 2023

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತನೆ : ಓರ್ವನ ವಿರುದ್ಧ ಪ್ರಕರಣ ದಾಖಲು


    ಭದ್ರಾವತಿ, ಮೇ. ೮: ಗಾಂಜಾ ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
     ನೂರಾನಿ ಮಸೀದಿ ಬಳಿ ನಿವಾಸಿ ಮುಜಾಹಿಲ್(೩೫) ಎಂಬಾತ  ಮೇ.೬ರಂದು ಮದ್ಯಾಹ್ನ ೧೨:೩೦ರ ಸಮಯದಲ್ಲಿ ನಗರದ ತರೀಕೆರೆ ರಸ್ತೆಯ ಮೂಪಾ ಕಾಂಫೌಂಡ್ ಹತ್ತಿರ ಸಾರ್ವಜನಿಕರೊಂದಿಗೆ ಆಸಭ್ಯವಾಗಿ ವರ್ತಿಸುತ್ತಿದ್ದು, ಈ ಭಾಗದಲ್ಲಿ ಗಸ್ತಿನಲ್ಲಿದ್ದ ಹಳೇನಗರ ಠಾಣೆ ಪೊಲೀಸರು ಈತನ ವಿಚಾರಣೆ ನಡೆಸಿದಾಗ ಯಾವುದೋ ಮಾದಕ ವಸ್ತು ಸೇವನೆಯಿಂದ ಅಮಲಿನಲ್ಲಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಈತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

No comments:

Post a Comment