ಭದ್ರಾವತಿ ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜುಕೇಷನ್ ಟ್ರಸ್ಟ್ ಸಹಯೋಗದೊಂದಿಗೆ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಕಾಲೇಜಿನಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಮೇ. ೧೭ : ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರವಹಿಸುವ ಮೂಲಕ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಮುಂದಾಗಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಹೇಳಿದರು.
ಅವರು ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜುಕೇಷನ್ ಟ್ರಸ್ಟ್ ಸಹಯೋಗದೊಂದಿಗೆ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸೊಳ್ಳೆಗಳ ನಿಯಂತ್ರಣದಿಂದ ಡೆಂಗ್ಯೂ ರೋಗ ಹರಡದಂತೆ ತಡೆಯಬಹುದು. ಈ ಹಿನ್ನಲೆಯಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೀರಿನ ಸಂಗ್ರಹಣೆಗಳನ್ನು ವಾರಕ್ಕೆರಡು ಬಾರಿ ತೊಳೆದು ಮುಚ್ಚಿಡಬೇಕು. ಘನತ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.
ಡಾ. ಅಚ್ಯುತ್ ಮಾತನಾಡಿ, ಡೆಂಗ್ಯೂ ಜ್ವರಕ್ಕೆ ಸೂಕ್ತ ಚಿಕಿತ್ಸೆ ಇಲ್ಲದಿರುವುದರಿಂದ ಹೆಚ್ಚು ದ್ರವ ಆಹಾರ ಸೇವನೆ ಮಾಡಬೇಕು. ಸೊಳ್ಳೆಪರದೆ ಬಳಸಿ ಆರೈಕೆಗೆ ಗಮನ ನೀಡಬೇಕೆಂದರು.
ಆರೋಗ್ಯ ಶಿಕ್ಷಣಾಧಿಕಾರಿ ಕೆ. ಸುಶೀಲಬಾಯಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಗಣೇಶ್, ನಿರ್ದೇಶಕರಾದ ಜೋಬಿಲ್, ರಾಜೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment