ಪ್ರತಿವರ್ಷದಂತೆ ಈ ಬಾರಿ ಸಹ ಭದ್ರಾವತಿ ನ್ಯೂಟೌನ್ ಕೂಲಿಬ್ಲಾಕ್ ಶೆಡ್, ಆಂಜನೇಯ ಅಗ್ರಹಾರದ ಶ್ರೀ ಮಾರಿಯಮ್ಮನವರ ದೇವಸ್ಥಾನದಲ್ಲಿ ಭಾನುವಾರ ಕರಗ ಉತ್ಸವ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ, ಮೇ. ೨೧ : ಪ್ರತಿವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಕೂಲಿಬ್ಲಾಕ್ ಶೆಡ್, ಆಂಜನೇಯ ಅಗ್ರಹಾರದ ಶ್ರೀ ಮಾರಿಯಮ್ಮನವರ ದೇವಸ್ಥಾನದಲ್ಲಿ ಭಾನುವಾರ ಕರಗ ಉತ್ಸವ ವಿಜೃಂಭಣೆಯಿಂದ ಜರುಗಿತು.
ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಿಂದ ಅಲಂಕೃತಗೊಂಡ ಶಕ್ತಿ ಕರಗ ಮೆರವಣಿಗೆ ಮೂಲಕ ಕಲಾತಂಡಗಳೊಂದಿಗೆ ಮಧ್ಯಾಹ್ನ ಸುಮಾರು ೨ ಗಂಟೆಗೆ ಅಮ್ಮನವರ ದೇವಸ್ಥಾನಕ್ಕೆ ಆಗಮಿಸಿತು. ನಂತರ ಕರಗ ಪ್ರತಿಷ್ಠಾಪನೆ ನಡೆಯಿತು. ಇದಕ್ಕೂ ಮೊದಲು ಬೆಳಿಗ್ಗೆ ಅಮ್ಮನವರಿಗೆ ಎಳನೀರು ಅಭಿಷೇಕ ಮತ್ತು ೧೦೮ ಕಲಶ ಸಹಿತ ಬ್ರಹ್ಮಕಲಶ ಅಭಿಷೇಕ ಮತ್ತು ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಬಹುತೇಕ ಭಕ್ತರು ಅಂಬಲಿ ಸೇವೆ ಹಾಗು ಪ್ರಸಾದ ನೈವೇದ್ಯ ಸಮರ್ಪಿಸಿದರು. ತೀರ್ಥಪ್ರಸಾದ ವಿನಿಯೋಗ, ನಂತರ ಅನ್ನದಾನ ನಡೆಯಿತು. ಸಂಜೆ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ರಥದಲ್ಲಿ ಅಮ್ಮನವರ ರಾಜಬೀದಿ ಉತ್ಸವ ಮತ್ತು ಮಂಗಳವಾದ್ಯದೊಂದಿಗೆ ಕರಗ ಆಟ ನಡೆಯಿತು. ಸುರಗಿತೋಪು, ಬಾಲಭಾರತಿ, ನ್ಯೂಟೌನ್, ವಿದ್ಯಾಮಂದಿರ, ಗಣೇಶ್‌ಕಾಲೋನಿ, ಜನ್ನಾಪುರ, ಹುಡ್ಕೋಕಾಲೋನಿ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.
No comments:
Post a Comment