ದಾದೇಗೌಡ
ಭದ್ರಾವತಿ, ಮೇ. ೨೩ : ತಾಲೂಕಿನ ಕಾಚಗೊಂಡನಹಳ್ಳಿ ನಿವಾಸಿ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಮಾಜಿ ನಿರ್ದೇಶಕ ದಾದೇಗೌಡ (೭೩) ನಿಧನ ಹೊಂದಿದರು.
ಅನಾರೋಗ್ಯದಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಪತ್ನಿ ವಿಜಯಲಕ್ಷ್ಮೀ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಡಿ. ಆನಂದ್ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಹೊಂದಿದ್ದರು.
ದಾದೇಗೌಡ ಅವರು ಒಕ್ಕಲಿಗರ ಸಂಘದ ಮಹಾಪೋಷಕರು, ಶ್ರೀ ಕಾಲಭೈರವೇಶ್ವರ ಪತ್ತಿನ ಸಹಕಾರ ಸಂಘದ ಹಿರಿಯ ಸದಸ್ಯರಾಗಿದ್ದರು. ಮಂಗಳವಾರ ಕಾಚಗೊಂಡನಹಳ್ಳಿಯಲ್ಲಿ ಇವರ ಅಂತ್ಯಕ್ರಿಯೆ ನೆರವೇರಿತು.
ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ, ಎಂ.ಎ ಅಜಿತ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ.ರವಿ, ಬಿ.ಎಸ್ ಮಲ್ಲೇಶ್, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರು, ನಿರ್ದೇಶಕರು ಸಂತಾಪ ಸೂಚಿಸಿದ್ದಾರೆ.
No comments:
Post a Comment