ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ಭದ್ರಾವತಿ, ಮೇ. ೨೦ : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗು ೮ ಮಂದಿ ಸಚಿವರಾಗಿ ಪದಗ್ರಹಣ ಸ್ವೀಕರಿಸುವ ಮೂಲಕ ನಾಡಿನ ಜನರ ಆಶಯದಂತೆ ನೂತನ ಜನಹಿತ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವ ವಿಶ್ವಾಸವನ್ನು ಮುಖಂಡರು, ಕಾರ್ಯಕರ್ತರು ವ್ಯಕ್ತಪಡಿಸಿದರು.
ನಗರದ ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಸದಸ್ಯರಾದ ಟಿಪ್ಪು ಸುಲ್ತಾನ್, ಬಷೀರ್ ಅಹಮದ್, ಜಾರ್ಜ್, ಮಾಜಿ ಅಧ್ಯಕ್ಷೆ ವೈ. ರೇಣುಕಮ್ಮ, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮಾಜಿ ಸದಸ್ಯ ಆಂಜನಪ್ಪ, ಪಕ್ಷದ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಮಂಜುಳಾ ರಾಮಚಂದ್ರ, ರೂಪಾನಾರಾಯಣ, ಮುಖಂಡರಾದ ರಮಾಕಾಂತ್, ಪ್ರಕಾಶ್‌ರಾವ್, ಕೇಶವ, ಅಯೂಬ್ ಖಾನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment