Friday, May 12, 2023

ವಿಜೃಂಭಣೆಯಿಂದ ಜರುಗಿದ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ಮಹಾರಥೋತ್ಸವ

ಭದ್ರಾವತಿ ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಸ್ವಾಮಿಯ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು.
    ಭದ್ರಾaವತಿ, ಮೇ. ೧೨: ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಸ್ವಾಮಿಯ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು.
    ಮಹಾರಥೋತ್ಸವ ಅಂಗವಾಗಿ ಬೆಳಿಗ್ಗೆ ನವಗ್ರಹ ಹೋಮ, ಆದಿವಾಸ ಹೋಮ, ರಥ ಶುದ್ಧಿ ಹೋಮ, ರಥಾಧಿವಾಸ ಹೋಮ, ಶ್ರೀ ಸ್ವಾಮಿಯ ರಥಾರೋಹಣ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಮಧ್ಯಾಹ್ನ ಸುಮಾರು ೧.೩೦ರ ಸಮಯದಲ್ಲಿ ದೇವಸ್ಥಾನ ಮುಂಭಾಗದಿಂದ ಮಹಾರಥೋತ್ಸವ ಆರಂಭಗೊಂಡು ರಂಗಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದವರೆಗೂ ಸಾಗಿತು. ನಂತರ ಅನ್ನಸಂರ್ಪಣೆ ನಡೆಯಿತು.
    ದೇವಸ್ಥಾನ ಪ್ರಧಾನ ಅರ್ಚಕ ಪವನ್‌ಕುಮಾರ್ ಉಡುಪ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.

No comments:

Post a Comment