ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎನ್‌ಸಿಡಿ ಘಟಕ ಹಾಗು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವತಿಯಿಂದ ಬುಧವಾರ ವಿಶ್ವ ತಂಬಾಕು ವಿರೋಧಿ ದಿನ ಆಚರಿಸಲಾಯಿತು.
ಭದ್ರಾವತಿ, ಮೇ. ೩೧: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎನ್‌ಸಿಡಿ ಘಟಕ ಹಾಗು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವತಿಯಿಂದ ಬುಧವಾರ ವಿಶ್ವ ತಂಬಾಕು ವಿರೋಧಿ ದಿನ ಆಚರಿಸಲಾಯಿತು.
ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಿಂದ ಪ್ಲೆಕ್ಸ್, ಫಲಕಗಳನ್ನು ಹಿಡಿದು ಜಾಥಾ ನಡೆಸುವ ಮೂಲಕ ತಂಬಾಕು ಉತ್ಪನ್ನಗಳಿಂದ ಉಂಟಾಗುವ ದುಷ್ಪರಿಣಾಗಳ ಕುರಿತು ಜಾಗೃತಿ ಮೂಡಿಸಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಆಸ್ಪತ್ರೆಯ ಹಿರಿಯ ವೈದ್ಯ ಡಾ. ಡಿ.ಎಸ್ ಶಿವಪ್ರಕಾಶ್ ಸೇರಿದಂತೆ ವೈದ್ಯರು, ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು ಹಾಗು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
No comments:
Post a Comment