Friday, May 12, 2023

ಶಾರದ ಗೆದ್ದಲ್ಲಿ ಕ್ಷೇತ್ರದ ಮೊದಲ ಶಾಸಕಿ

    ಶಾರದ ಅಪ್ಪಾಜಿ
ಭದ್ರಾವತಿ, ಮೇ. ೧೨ : ಈ ಬಾರಿ ಚುನಾವಣೆ ಮತದಾನ ಫಲಿತಾಂಶ ಮೇ.೧೩ರ ಶನಿವಾರ ಪ್ರಕಟಗೊಳ್ಳಲಿದ್ದು, ಒಂದು ವೇಳೆ ಶಾರದ ಅಪ್ಪಾಜಿ ಗೆಲುವು ಸಾಧಿಸಿದ್ದಲ್ಲಿ ಕ್ಷೇತ್ರದ ಮೊದಲ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
    ಕ್ಷೇತ್ರದಲ್ಲಿ ಇದುವರೆಗೂ ನಡೆದಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಬಲ ಮಹಿಳಾ ಪ್ರತಿಸ್ಪರ್ಧಿ ಯಾರು ಇಲ್ಲ ಎಂಬುದು ವಿಶೇಷವಾಗಿದೆ. ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪತ್ನಿ ಶಾರದ ಅಪ್ಪಾಜಿ ಈ ಬಾರಿ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
    ರಾಜಕೀಯದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ಎಂ.ಜೆ ಅಪ್ಪಾಜಿ ನಿಧನದ ನಂತರ ಕೇವಲ ೨ ವರ್ಷದಲ್ಲಿ ಶಾರದ ಅಪ್ಪಾಜಿ ಸಾಕಷ್ಟು ಬದಲಾವಣೆಯಾಗುವ ಮೂಲಕ ಪಕ್ಷವನ್ನು ಸಂಘಟಿಸಿ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿದ್ದಾರೆ. ಇದೀಗ ಫಲಿತಾಂಶ ಅವರ ಮುಂದಿನ ಭವಿಷ್ಯ ನಿರ್ಧರಿಸಲಿದೆ.
    ಕ್ಷೇತ್ರದಲ್ಲಿ ಇದುವರೆಗೂ ಮಹಿಳೆಯರು ವಿಧಾನಸಭೆಗೆ ಆಯ್ಕೆಯಾಗಿಲ್ಲ. ಈ ಬಾರಿ ಚುನಾವಣೆಯಲ್ಲಿ ಶಾರದ ಅಪ್ಪಾಜಿ ಪ್ರಬಲ ಎದುರಾಳಿಯಾಗಿದ್ದು, ಈ ಹಿನ್ನಲೆಯಲ್ಲಿ ಒಂದು ವೇಳೆ ಅವರು ಆಯ್ಕೆಯಾದಲ್ಲಿ ಕ್ಷೇತ್ರದ ಮೊದಲ ಶಾಸಕಿಯಾಗಲಿದ್ದಾರೆ.

No comments:

Post a Comment