ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ನಿವಾಸಿಗಳಿಂದ ಮನವಿ
ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ವಾಸಿಸುತ್ತಿರುವ ಸುಮಾರು ೭೫ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡುವಂತೆ ಆಗ್ರಹಿಸಿ ಗುರುವಾರ ಸರ್ಕಾರಕ್ಕೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮೇ. ೨೫: ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ವಾಸಿಸುತ್ತಿರುವ ಸುಮಾರು ೭೫ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡುವಂತೆ ಆಗ್ರಹಿಸಿ ಗುರುವಾರ ಸರ್ಕಾರಕ್ಕೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್) ಪಕ್ಷದ ಸಹಕಾರದೊಂದಿಗೆ ನಿವಾಸಿಗಳು ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬಡ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ವಿಫಲವಾಗಿದ್ದು, ಇದರಿಂದಾಗಿ ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಸರ್ಕಾರ ತಕ್ಷಣ ಸ್ಪಂದಿಸುವ ಮೂಲಕ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಪಕ್ಷದ ತಾಲೂಕು ಅಧ್ಯಕ್ಷ ನಾಗರಾಜ್ ರಾವ್ ಸಿಂಧೆ, ಯುವ ಘಟಕದ ಅಧ್ಯಕ್ಷ ಅರಳಿಹಳ್ಳಿ ತ್ಯಾಗರಾಜ್, ಸಂಘಟನಾ ಕಾರ್ಯದರ್ಶಿ ರಾಜೇಂದ್ರ, ಮುಖಂಡರಾದ ಮಲ್ಲಿಕಾರ್ಜುನ್, ತೀರ್ಥ ಕುಮಾರ್, ಚಲಪತಿ, ಸಂತೋಷ್, ಉದಯಕುಮಾರ್, ಸುಮಿತ್ರ ಬಾಯಿ. ಚಂದನ ಮತ್ತು ಅರಳಿಹಳ್ಳಿ ಗ್ರಾಮಸ್ಥರು ಉಪಸಿತರಿದ್ದರು
No comments:
Post a Comment