ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್,
ಭದ್ರಾವತಿ, ಮೇ. ೨೪: ನಮ್ಮೂರಿನಲ್ಲಿ ಇದುವರೆಗೂ ಯಾರು ಸಚಿವರಾಗಿಲ್ಲ. ಶಾಸಕ ಬಿ.ಕೆ ಸಂಗಮೇಶ್ವರ್ ಸಚಿವರಾಗುವುದು ಖಚಿತ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಹೇಳಿದರು.
ಅವರು ಪತ್ರಿಕೆಗೆ ಜೊತೆ ಮಾತನಾಡಿ, ನಮ್ಮೂರಿನ ಮೇಲೆ ನನಗೆ ಅಭಿಮಾನವಿದೆ. ಶಾಸಕರು ಸಚಿವರಾಗಬೇಕೆಂಬ ಆಸೆ ನನಗೂ ಇದೆ. ಒಂದು ವೇಳೆ ವಿಳಂಬವಾಗಬಹುದು. ಆದರೆ ಅವರು ಸಚಿವರಾಗುವುದು ಖಚಿತ. ಇದರ ಬಗ್ಗೆ ಯಾರಿಗೂ ಆತಂಕಬೇಡ ಎಂದರು.
ಸಂಗಮೇಶ್ವರ್‌ಗೆ ಸಚಿವ ಸ್ಥಾನ ಕೊಡಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸುತ್ತಿದ್ದೇನೆ. ಈ ಸಂಬಂಧ ರಾಹುಲ್ ಗಾಂಧಿಯವರ ಗಮನ ಸೆಳೆಯುವುದಾಗಿ ಭರವಸೆ ವ್ಯಕ್ತಪಡಿಸಿದರು.
ಶಾಸಕ ಬಿ.ಕೆ ಸಂಗಮೇಶ್ವರ್ ಮುಖ್ಯಮಂತ್ರಿ ಭೇಟಿ :
ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಬೆಂಗಳೂರಿನಲ್ಲಿಯೇ ಉಳಿದುಕೊಂಡಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಸಚಿವ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿದ್ದು, ಪಕ್ಷದ ಮೇಲೆ ನಾನಾ ರೀತಿಯಲ್ಲಿ ಒತ್ತಡ ಹಾಕುವ ತಂತ್ರಗಾರಿಕೆಗೆ ಮುಂದಾಗಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದಾಗಿ ಭೇಟಿ ಮಾಡಿ ಕ್ಷೇತ್ರದ ಜನತೆಗೆ ನೀಡಿರುವ ಭರವಸೆಯಂತೆ ನನಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದಾಗಿ ಭೇಟಿ ಮಾಡಿ ಅವರನ್ನು ಸನ್ಮಾನಿಸಿ ಅಭಿನಂದಿಸುವ ಮೂಲಕ ಕ್ಷೇತ್ರದ ಜನತೆಗೆ ನೀಡಿರುವ ಭರವಸೆಯಂತೆ ನನಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
No comments:
Post a Comment