ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಿ.
ಭದ್ರಾವತಿ, ಮೇ. ೨೬: ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ೪೩ನೇ ವರ್ಷದ ಕರಗ ಮಹೋತ್ಸವ ಮೇ.೨೮ರವರೆಗೆ ನಡೆಯಲಿದೆ.
ಶುಕ್ರವಾರ ಬೆಳಿಗ್ಗೆ ದೇವತಾ ಪ್ರಾರ್ಥನೆ, ಶುದ್ಧ ಪುಣ್ಯಾಹ್ನ ಮತ್ತು ಧ್ವಜಾರೋಹಣ ಸಂಜೆ ಕಂಕಣ ಬಂಧನ ನೆರವೇರಿತು. ಮೇ.೨೭ರ ಶನಿವಾರ ಬೆಳಿಗ್ಗೆ ೧೦ ಗಂಟೆಗೆ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ. ಸಂಜೆ ೬ ಗಂಟೆಗೆ ಉಮಾ ಮಹಿಳಾ ಭಜನ ಮಂಡಳಿ ವತಿಯಿಂದ ಭಕ್ತಿಗೀತೆ ನಡೆಯಲಿದೆ.
ಮೇ.೨೮ರಂದು ಬೆಳಿಗ್ಗೆ ೯ ಗಂಟೆಗೆ ಎಳನೀರು ಅಭಿಷೇಕ, ಪಂಚಾಮೃತ ಮತ್ತು ತೀರ್ಥ ಪ್ರಸಾದ ವಿನಿಯೋಗ, ಮಧ್ಯಾಹ್ನ ೧೨ ಗಂಟೆಗೆ ಅಮ್ಮನವರ ಶಕ್ತಿ ಕರಗ ಸ್ಥಾಪನೆ ನಂತರ ಮಹಾಮಂಗಳಾರತಿಯೊಂದಿಗೆ ತೀರ್ಥಪ್ರಸಾದ ವಿನಿಯೊಗ ಹಾಗು ಶ್ರಿ ದೇವಿಗೆ ಅಂಬಲಿ ಮತ್ತು ಅನ್ನದಾನ ಸಂತರ್ಪಣೆ ನಡೆಯಲಿದೆ. ಭಕ್ತರು ಹೆಚ್ಚಿನಯಲ್ಲಿ ಪಾಲ್ಗೊಂಡು ಕರಗ ಮಹೋತ್ಸವ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment