ಭದ್ರಾವತಿ, ಮೇ. ೩೦ : ಅನೌಪಚಾರಿಕ ಪಡಿತರ ತಾಲೂಕು ಕಛೇರಿ, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ತಾಲೂಕು ಶಾಖೆ ವತಿಯಿಂದ ಮೇ.೩೧ರಂದು ಮಧ್ಯಾಹ್ನ ೩ ಗಂಟೆಗೆ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದು, ತಾಲೂಕು ಶಾಖೆ ನಗರ ಅಧ್ಯಕ್ಷ ಎಸ್.ಆರ್ ನಾಗರಾಜ್ ಮತ್ತು ಅನೌಪಚಾರಿಕ ಪಡಿತರ ಕಛೇರಿ ಸಹಾಯಕ ನಿರ್ದೇಶಕ ವಿ.ಎಸ್ ಅಂಕಯ್ಯ ಉಪಸ್ಥಿತರಿರುವರು.
ಆಹಾರ ನಿರೀಕ್ಷಕಿ ಡಿ. ಗಾಯತ್ರಿ ದೇವಿ, ಕೆಎಫ್‌ಸಿಎಸ್‌ಸಿ ಮಳಿಗೆ ವ್ಯವಸ್ಥಾಪಕ ಜೆ.ಎಸ್ ಈಶ್ವರಪ್ಪ ಮತ್ತು ಆಹಾರ ಇಲಾಖೆ ಬಿ.ಆರ್ ಓಂಕಾರಯ್ಯ ಉಪಸ್ಥಿತರಿರುವರು.
No comments:
Post a Comment