ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿ(ಪ್ರೌಢ ಶಾಲಾ ವಿಭಾಗ)ನಲ್ಲಿ ಬುಧವಾರ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರದ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಯಿತು.
ಭದ್ರಾವತಿ, ಮೇ. ೩೧: ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿ(ಪ್ರೌಢ ಶಾಲಾ ವಿಭಾಗ)ನಲ್ಲಿ ಬುಧವಾರ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ಆಚರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನರವರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿನಿಯರಿಗೆ ಸರ್ಕಾರದ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಯಿತು. ಕಾಲೇಜು ಆವರಣ ತಳಿರುತೋರಣಗಳಿಂದ ಕಂಗೊಳಿಸುತ್ತಿತ್ತು. ಹಬ್ಬದ ವಾತಾವರಣ ಕಂಡು ಬರುತ್ತಿತ್ತು. ಮೊದಲ ದಿನ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಉಪಪ್ರಾಚಾರ್ಯರಾದ ಟಿ.ಎಸ್ ಸುಮನ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಕಲಿಕೆಯಲ್ಲಿ ತೊಡಗಲು ಮತ್ತು ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಸಾರ್ಥಕ ಗೊಳಿಸಲು ಮಾರ್ಗದರ್ಶನ ನೀಡಿದರು.
ನಗರಸಭಾ ಸದಸ್ಯ ಕಾಂತರಾಜು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment