ಭದ್ರಾವತಿ, ಮೇ. ೨ : ನಗರಸಭೆ ವ್ಯಾಪ್ತಿಯಲ್ಲಿ ವಿದ್ಯುತ್ ತಗುಲಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಹೊಸಮನೆ ತ್ಯಾಗರಾಜ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಗೌತಮ್(೯) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳು ಆಟ ವಾಡುತ್ತಿದ್ದಾಗ ಗೌತಮ್‌ಗೆ ವಿದ್ಯುತ್ ತಗುಲಿದೆ ಎನ್ನಲಾಗಿದೆ. ಗೌತಮ್ ಅತ್ತೆ ಮನೆ ಬಂದಾಗ ಈ ಘಟನೆ ನಡೆದಿದೆ. ಈ ಸಂಬಂಧ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
No comments:
Post a Comment