Monday, May 8, 2023

ಮತದಾನ ಜಾಗೃತಿ : ಬೈಕ್ ರ‍್ಯಾಲಿ

ಭದ್ರಾವತಿಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ನಗರಸಭೆ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸೋಮವಾರ ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಬೈಕ್ ರ‍್ಯಾಲಿಗೆ ಚಾಲನೆ ನೀಡಲಾಯಿತು.  
    ಭದ್ರಾವತಿ, ಮೇ. ೮ : ತಾಲೂಕು ಆಡಳಿತ, ತಾಲೂಕು ಪಂಚಾಯತಿ, ನಗರಸಭೆ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸೋಮವಾರ ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಬೈಕ್ ರ‍್ಯಾಲಿ ನಡೆಸಲಾಯಿತು.
    ವಿಧಾನಸಭಾ ಕ್ಷೇತ್ರ ಮತದಾನ ಪ್ರಮಾಣದಲ್ಲಿ ಕುಠಿತಗೊಂಡಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲೆಡೆ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ನಗರದ ಅಂಬೇಡ್ಕರ್ ವೃತ್ತದಿಂದ ತಾಲೂಕು ಪಂಚಾಯಿತಿ ಆವರಣದವರೆಗೂ ಬೈಕ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
    ತಹಸೀಲ್ದಾರ ಸುರೇಶ್ ಆಚಾರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ನಗರಸಭೆ, ತಾಲೂಕು ಪಂಚಾಯಿತಿ, ತಾಲೂಕು ಕಚೇರಿ, ಗ್ರಾಮ ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

No comments:

Post a Comment