ಭದ್ರಾವತಿಯಲ್ಲಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಡಬಲ್ ರಸ್ತೆಯಲ್ಲಿ ಮರ ಉರುಳಿ ಬಿದ್ದಿದ್ದು, ಕೊಂಬೆಗಳು ಮುರಿದು ಬಿದ್ದಿವೆ.
ಭದ್ರಾವತಿ, ಮೇ. ೧೧: ಕ್ಷೇತ್ರದಲ್ಲಿ ಬುಧವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿದ್ದು, ಮತ್ತೆ ಕೆಲವೆಡೆ ಮರದ ಕೊಂಬೆಗಳು ಮುರಿದು ಬಿದ್ದಿರುವ ಘಟನೆ ನಡೆದಿದೆ.
ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಡಬಲ್ ರಸ್ತೆಯಲ್ಲಿ ಮರ ಉರುಳಿ ಬಿದ್ದಿದ್ದು, ಕೊಂಬೆಗಳು ಮುರಿದು ಬಿದ್ದಿವೆ. ಹುಡ್ಕೋ ಕಾಲೋನಿಯಲ್ಲಿ ಮನೆಯೊಂದರ ಮುಂಭಾಗ ತೆಂಗಿನ ಮರ ಉರುಳಿ ಬಿದ್ದಿದ್ದು, ಇದೆ ರೀತಿ ಹಲವೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿ ಬಿದ್ದಿವೆ. ಉಜ್ಜನಿಪುರದಲ್ಲಿ ಮನೆಯೊಂದರ ತಗಡಿನ ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ನಡೆದಿದೆ.
ಭದ್ರಾವತಿ ಉಜ್ಜನಿಪುರದಲ್ಲಿ ಮನೆಯೊಂದರ ತಗಡಿನ ಮೇಲ್ಛಾವಣಿ ಹಾರಿ ಹೋಗಿರುವುದು.
ಸಂಜೆ ೪.೩೦ ರಿಂದ ಸುಮಾರ ೧ ತಾಸು ಸುರಿದ ಗಾಳಿಮಳೆಯಿಂದಾಗಿ ಮತದಾರರು ಮತದಾನ ಮಾಡಲು ಪರದಾಡುವಂತಾಯಿತು. ಕೆಲವು ಮತಗಟ್ಟೆಗಳಲ್ಲಿ ಗಾಳಿ ಮಳೆಯಿಂದ ಸೋರಿಕೆ ಉಂಟಾಗಿದ್ದು, ಮಳೆಯಲ್ಲಿಯೇ ಮತದಾರರು ಮತದಾನ ಮಾಡುವ ಸ್ಥಿತಿ ಕಂಡು ಬಂದಿತು. ಗುರುವಾರ ಸಂಜೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ.
No comments:
Post a Comment