ಭದ್ರಾವತಿ, ಮೇ. ೨೯ : ಶಿವಮೊಗ್ಗ ಪೊಲೀಸ್ ವತಿಯಿಂದ ರಸ್ತೆ ನಿಯಮ ಕುರಿತು ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ.
ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಇಲಾಖೆ ನಿರಂತರವಾಗಿ ತೊಡಗಿಸಿಕೊಂಡಿದೆ. ಅದರಲ್ಲೂ ಯುವ ಸಮೂಹಕ್ಕೆ ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಸಂಚಾರಿ ಪೊಲೀಸರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಪ್ರಮುಖವಾಗಿ ಹೆಲ್ಮೆಟ್ ಧರಿಸದಿರುವ ಹಾಗು ಚಾಲನಾ ಪರವಾನಗಿ ಇಲ್ಲದ ಪ್ರಕರಣಗಳು ಹೆಚ್ಚಾಗುತ್ತಿವೆ. ಸಂಚಾರಿ ಪೊಲೀಸ್ ಠಾಣಾಧಿಕಾರಿ ಭಾರತಿ ಅನಿಲ್ ಪತ್ರಿಕೆಗೆ ಮಾಹಿತಿ ನೀಡಿ, ಇಲಾಖೆವತಿಯಿಂದ ರಸ್ತೆ ಸುರಕ್ಷತೆ ಹಾಗು ನಿಯಮ ಪಾಲನೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಸಹ ಹೆಲ್ಮೆಟ್ ಧರಿಸದಿರುವ ಪ್ರಕರಣಗಳು ಹೆಚ್ಚುತ್ತಿವೆ. ಪ್ರತಿ ದಿನ ಸುಮಾರು ೨೦ ಪ್ರಕರಣಗಳು ಹಾಗು ಚಾಲನಾ ಪರವಾನಗಿ ಇಲ್ಲದ ಸುಮಾರು ೨-೩ ಪಕರಣಗಳು ದಾಖಲಾಗುತ್ತಿವೆ. ಅಲ್ಲದೆ ಸರ್ಕಾರ ರಸ್ತೆ ಸುರಕ್ಷತೆ ಹಾಗು ನಿಯಮಗಳಿಗೆ ಸಂಬಂಧಿಸಿದಂತೆ ಹೊಸ ಹೊಸ ಕಾನೂನುಗಳನ್ನು ಜಾರಿಗೊಳಿಸುತ್ತಿದೆ. ಈ ಕಾನೂನುಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಲಾಖೆ ಮುಂದಾಗುತ್ತಿದೆ ಎಂದರು.
ನಗರದಲ್ಲಿ ಹೆಚ್ಚಿನ ಸಂಖ್ಯೆಯ ಯುವಕರು ಚಾಲನಾ ಪರವಾನಗಿ ಇಲ್ಲದೆ ವಾಹನಗಳನ್ನು ಚಲಾಯಿಸುತ್ತಿದ್ದು, ಈ ಹಿನ್ನಲೆಯಲ್ಲಿ ಸುಮಾರು ೧೦೦೦ ಮಂದಿಗೆ ಉಚಿತವಾಗಿ ಚಾಲನಾ ಪರವಾನಗಿ ಮಾಡಿಸಿ ಕೊಡುವ ಬೃಹತ್ ಶಿಬಿರ ಆಯೋಜಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಂಘ-ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಆಸಕ್ತರು ಮುಂದೆ ಬಂದಲ್ಲಿ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
ಉಚಿತವಾಗಿ ಚಾಲನಾ ಪರವಾನಗಿ ಸಂಘ ಸಂಸ್ಥೆ ನೆರವಿನಿಂದ ಮಾಡಿಸಿಕೂಡುವ ಅಗತ್ಯ ಏನು. ಸಾವಿರಾರು ರೂಪಾಯಿ ಕೊಟ್ಟು ವಾಹನ ತೆಗೆದು ಕೊಳ್ಳುವವರು ಪರವಾನಗಿ ದಂಡದ ಸಮೇತ ಪಡೆಯಲಿ.
ReplyDeleteಹೊಸಮನೆ ಮುಖ್ಯ ರಸ್ತೆ ಯಲ್ಲಿ ರಸ್ತೆ ನಿಯಮ ಉಲ್ಲಂಘೆನ್ ಜಾಸ್ತಿ