ಭದ್ರಾವತಿಯಲ್ಲಿ ಆಮ್ ಆದ್ಮಿ ಪಾರ್ಟಿ(ಎಎಪಿ) ಪಕ್ಷದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಸಮಾಜ ಸೇವಕ ಆನಂದ್ ಮೆಡಿಕಲ್‌ರವರ ಪರವಾಗಿ ಕ್ಷೇತ್ರದಾದ್ಯಂತ ವ್ಯಾಪಕ ಪ್ರಚಾರ ನಡೆಯುತ್ತಿದ್ದು, ಈ ನಡುವೆ ಅವರ ಮೂವರು ಮಕ್ಕಳು ತಂದೆಯ ಪರವಾಗಿ ಮತಯಾಚನೆ ನಡೆಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಭದ್ರಾವತಿ, ಮೇ. ೨ : ಆಮ್ ಆದ್ಮಿ ಪಾರ್ಟಿ(ಎಎಪಿ) ಪಕ್ಷದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಸಮಾಜ ಸೇವಕ ಆನಂದ್ ಮೆಡಿಕಲ್‌ರವರ ಪರವಾಗಿ ಕ್ಷೇತ್ರದಾದ್ಯಂತ ವ್ಯಾಪಕ ಪ್ರಚಾರ ನಡೆಯುತ್ತಿದ್ದು, ಈ ನಡುವೆ ಅವರ ಮೂವರು ಮಕ್ಕಳು ತಂದೆಯ ಪರವಾಗಿ ಮತಯಾಚನೆ ನಡೆಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಆನಂದ್‌ರವರ ಇಬ್ಬರು ಪುತ್ರಿಯರಾದ ಸೌಮ್ಯ ಮತ್ತು ನಮ್ರತಾ ವೈದ್ಯರಾಗಿದ್ದು, ಪುತ್ರ ಶಿವ ನೀಲ್ ಸಹ ಪದವಿಧರರಾಗಿದ್ದಾರೆ. ಮೂವರು ಮಕ್ಕಳು ತಂದೆಯ ಪರವಾಗಿ ಪಕ್ಷದ ಕಾರ್ಯಕರ್ತರೊಂದಿಗೆ ಮತಯಾಚನೆ ನಡೆಸುತ್ತಿದ್ದು, ಈ ಬಾರಿ ಆಮ್ ಆದ್ಮಿ ಪಾರ್ಟಿ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ.
ಕಾರ್ಯಕರ್ತರೊಂದಿಗೆ ಕಳೆದ ಸುಮಾರು ೧ ವರ್ಷದಿಂದ ಕ್ಷೇತ್ರದಾದ್ಯಂತ ನಿರಂತರ ಪ್ರಚಾರ ಕಾರ್ಯದಲ್ಲಿ ಆನಂದ್‌ರವರು ತೊಡಗಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಕ್ಷೇತ್ರದ ಪ್ರತಿಯೊಬ್ಬ ಮತದಾರರನ್ನು ತಲುಪಿ ಪಕ್ಷದ ಜನಪರ ಯೋಜನೆಗಳು ಹಾಗು ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಭವಿಷ್ಯದಲ್ಲಿ ಈಡೇರಿಸಬಹುದಾದ ಭರವಸೆಗಳನ್ನು ಮನವರಿಕೆ ಮಾಡಿಕೊಟ್ಟಿರುವ ವಿಶ್ವಾಸ ಆನಂದ್ ಹಾಗು ಕಾರ್ಯಕರ್ತರು ಹೊಂದಿದ್ದಾರೆ.
ಭ್ರಷ್ಟಾಚಾರ ನಿರ್ಮೂಲನೆ ಮಾಡಿ ಉತ್ತಮ ಆಡಳಿತ ನೀಡುವ ಗುರಿ : ಆನಂದ್
ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಜೊತೆಗೆ ಉತ್ತಮ ಆಡಳಿತ ನೀಡುವುದು ಪಕ್ಷದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಈ ಬಾರಿ ಕ್ಷೇತ್ರದ ಮತದಾರರು ನನ್ನನ್ನು ಬೆಂಬಲಿಸುವಂತೆ ಆನಂದ್ ಮನವಿ ಮಾಡಿದ್ದಾರೆ.
ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಆನಂದ್ ಮೆಡಿಕಲ್
ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದು ಮುಖ್ಯ ಗುರಿಯಾಗಿದ್ದು, ಅಭಿವೃದ್ಧಿ ಕಾರ್ಯಗಳ ಜೊತೆಗೆ ನಿರುದ್ಯೋಗ ನಿರ್ಮೂಲನೆ ಮಾಡುವುದು. ಎಲ್ಲಾ ವರ್ಗದ ಜನರ ಹಿತ ಕಾಪಾಡುವುದು ಪಕ್ಷದ ಉದ್ದೇಶಗಳಾಗಿವೆ ಎಂದರು.
ಕ್ಷೇತ್ರದಲ್ಲಿ ನಾನು ಹಲವಾರು ವರ್ಷಗಳಿಂದ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಯಾವುದೇ ಆರೋಪಗಳಿಗೆ ಗುರಿಯಾಗದ ವ್ಯಕ್ತಿಯಾಗಿದ್ದೇನೆ. ವೈಯಕ್ತಿಕ ಬದುಕಿನಲ್ಲೂ ಉತ್ತಮ ವ್ಯಕ್ತಿತ್ವ ರೂಢಿಸಿಕೊಂಡಿದ್ದೇನೆ. ಮತದಾರರು ನನ್ನನ್ನು ಆಯ್ಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡುವ ವಿಶ್ವಾಸ ಹೊಂದಿದ್ದೇನೆ ಎಂದರು.
No comments:
Post a Comment