ಭದ್ರಾವತಿ, ಮೇ. ೧: ಮಹಿಳಾ ಪೊಲೀಸ್ ಠಾಣಾಧಿಕಾರಿಯೊಬ್ಬರ ದ್ವಿಚಕ್ರವಾಹನಕ್ಕೆ ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿರುವ ಘಟನೆ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ನಡೆದಿದೆ.
ಪೇಪರ್‌ಟೌನ್ ಪೊಲೀಸ್ ಠಾಣಾಧಿಕಾರಿ ಶಿಲ್ಪ ನಾಯನೇಗಲಿಯವರು ಏ.೩೦ರ ಭಾನುವಾರ ಮಧ್ಯಾಹ್ನ ೧.೨೦ರ ಸಮಯದಲ್ಲಿ ಇಲಾಖೆಯ ಹಿರೋ ಮೆಸ್ಟ್ರೋ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಬೊಮ್ಮನಕಟ್ಟೆ ಕಡೆಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಶಿಲ್ಪ ನಾಯನೇಗಲಿಯವರು ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ. ಈ ಸಂಬಂಧ ಪೇಪರ್‌ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
No comments:
Post a Comment