ಭದ್ರಾವತಿ, ಜೂ. ೧೦ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದ ಭದ್ರಾವತಿ ಘಟಕದಲ್ಲಿ ರಾಜ್ಯ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗು ವೇಗದೂತ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಶಕ್ತಿ ಯೋಜನೆ ಉದ್ಘಾಟನೆ ಜೂ.೧೧ರಂದು ಮಧ್ಯಾಹ್ನ ೧೨.೩೦ಕ್ಕೆ ನಗರದ ಮುಖ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ನಡೆಯಲಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಉಪವಿಭಾಗಾಧಿಕಾರಿ ರವಿಚಂದ್ರನಾಯಕ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ತಹಸೀಲ್ದಾರ್ ಸುರೇಶ್ ಆಚಾರ್, ಪೊಲೀಸ್ ಉಪಾಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಮನುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಘಟಕ ವ್ಯವಸ್ಥಾಪಕಿ ಅಂಬಿಕಾ ಸುಧೀರ್ ಕೋರಿದ್ದಾರೆ.
No comments:
Post a Comment