ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯತಿ ಅಮೃತ ಸರೋವರ ಕಾಮಗಾರಿ ಬಳಸೋಕೆರೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೂಲಿ ಕಾರ್ಮಿಕರೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಭದ್ರಾವತಿ, ಜೂ. ೬ : ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯತಿ ಅಮೃತ ಸರೋವರ ಕಾಮಗಾರಿ ಬಳಸೋಕೆರೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೂಲಿ ಕಾರ್ಮಿಕರೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನ, ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಮತ್ತು ಇ-ಶ್ರಮ್ ನೋಂದಾವಣಿ ಅಭಿಯಾನ ಹಾಗು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಸಸಿಗಳನ್ನು ನೆಡುವ ಜೊತೆಗೆ ಉದ್ಯೋಗ ಖಾತ್ರಿ ಚೀಟಿಗಳನ್ನು ಪ್ರದರ್ಶಿಸಿ ಕೂಲಿ ಕಾರ್ಮಿಕರು ಸಂಭ್ರಮಿಸಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಯೋಜನಾ ನಿರ್ದೇಶಕಿ ನಂದಿನಿ, ಉಪೇಂದ್ರ ಬಾಬು, ಚೇತನ್‌ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment