Sunday, June 18, 2023

ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

ಭದ್ರಾವತಿ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಹಾಗು ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವತಿಯಿಂದ ಭಾನುವಾರ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. 
    ಭದ್ರಾವತಿ, ಜೂ. ೧೮ : ನಗರದ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಹಾಗು ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವತಿಯಿಂದ ಭಾನುವಾರ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. 
    ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಶಿಬಿರವನ್ನು ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವೈದ್ಯಕೀಯ ವಿಭಾಗದ ವ್ಯವಸ್ಥಾಪಕ ಡಾ. ಶಿವಮೂರ್ತಿ ಉದ್ಘಾಟಿಸಿದರು. 
ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಕಾಂತರಾಜ್, ಮೊಹಮದ್, ಶಿವಮೊಗ್ಗ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನರರೋಗ ತಜ್ಞ ಡಾ. ನಾರಾಯಣ ಪಂಜಿ, ನಗರದ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ವೈದ್ಯೆ ಡಾ. ವೀಣಾಭಟ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ಜಿಲ್ಲಾಧ್ಯಕ್ಷ ಗೋಪಾಲ್, ಸತ್ಯಜ್ಯೋತಿ ಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಇ.ಸಿ.ಜಿ ಯೊಂದಿಗೆ ಹೃದಯ, ಕಿಡ್ನಿ, ದಂತ, ಕಣ್ಣು, ಕಿವಿ, ಮೂಗು, ಗಂಟಲು, ಮೂಳೆ, ನರ, ಚರ್ಮ ರೋಗಗಳು, ಸಕ್ಕರೆ ಖಾಯಿಲೆ, ಮಕ್ಕಳು ಮತ್ತು ಸ್ತ್ರೀಯರ ಖಾಯಿಲೆಗಳು ಹಾಗು ಇತರೆ ರೋಗಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನಡೆಸಲಾಯಿತು. ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಎಲ್ಲಾ ವಿಭಾಗದ ನುರಿತ ತಜ್ಞ ವೈದ್ಯರುಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಶಿಬಿರ ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ನಡೆಯಿತು. 



ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವ್ಯವಸ್ಥಾಪಕ ಡಾ. ಶಿವಮೂರ್ತಿ ಉದ್ಘಾಟಿಸಿದರು. 

No comments:

Post a Comment