ಜನಸಂಘದ ಸಂಸ್ಥಾಪಕರಾದ ಡಾ. ಶಾಮ್‌ಪ್ರಸಾದ್ ಮುಖರ್ಜಿಯವರ ಬಲಿದಾನ ದಿನ ಭಾರತೀಯ ಜನತಾ ಪಕ್ಷ ಭದ್ರಾವತಿ ತಾಲೂಕು ಮಂಡಲ ವತಿಯಿಂದ ಶುಕ್ರವಾರ ಆಚರಿಸಲಾಯಿತು.
ಭದ್ರಾವತಿ, ಜೂ. ೨೩ : ಜನಸಂಘದ ಸಂಸ್ಥಾಪಕರಾದ ಡಾ. ಶಾಮ್‌ಪ್ರಸಾದ್ ಮುಖರ್ಜಿಯವರ ಬಲಿದಾನ ದಿನ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಶುಕ್ರವಾರ ಆಚರಿಸಲಾಯಿತು.
ಪಕ್ಷದ ಕಾರ್ಯಾಲಯದಲ್ಲಿ ಬೆಳಿಗ್ಗೆ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಸಂಸ್ಥಾಪಕರ ತ್ಯಾಗ ಬಲಿದಾನಗಳನ್ನು ಸ್ಮರಿಸಿ ಪುಷ್ಪ ನಮನ, ನುಡಿ ನಮನ ಸಲ್ಲಿಸಲಾಯಿತು.
ಶ್ಯಾಮ್‌ಪ್ರಸಾದ್ ಮುಖರ್ಜಿಯವರ ಭಾವಚಿತ್ರ ಬಿಡುಗಡೆ ಮಾಡಿ ಎಲ್ಲಾ ಬೂತ್‌ಗಳಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ಮಹಾಶಕ್ತಿ ಕೇಂದ್ರಗಳಿಗೆ ಕರೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ. ಪ್ರಭಾಕರ್, ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಚನ್ನೇಶ್. ಪ್ರಮುಖರಾದ ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್, ಮಂಗೋಟೆ ರುದ್ರೇಶ್, ಕೂಡ್ಲಿಗೆರೆ ಹಾಲೇಶ್. ಎಂ. ಮಂಜುನಾಥ್, ಎಂ.ಎಸ್ ಸುರೇಶಪ್ಪ. . ರಾಮಲಿಂಗಯ್ಯ. ಟಿ.ವಿ ವೆಂಕಟೇಶ್, ಮಹಾಶಕ್ತಿ ಕೇಂದ್ರ ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಂಘ ಪರಿವಾರದ ಹಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
No comments:
Post a Comment