ಭದ್ರಾವತಿ ತಾಲೂಕಿನ ರಾಮನಗರ ಬಸ್ ನಿಲ್ದಾಣ ದುರಸ್ಥಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಯುವ ಘಟಕದ ವತಿಯಿಂದ ವೀರಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಗುರುವಾರ ಮನವಿ ಸಲ್ಲಿಸಲಾಗಿದೆ.
ಭದ್ರಾವತಿ, ಜೂ. ೮ : ತಾಲೂಕಿನ ರಾಮನಗರ ಬಸ್ ನಿಲ್ದಾಣ ದುರಸ್ಥಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಯುವ ಘಟಕದ ವತಿಯಿಂದ ವೀರಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಗುರುವಾರ ಮನವಿ ಸಲ್ಲಿಸಲಾಗಿದೆ.
ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳುವ ಆಸನಗಳ ಸ್ಥಳದಲ್ಲಿ ನೆಲಹಾಸು ಹಾಳಾಗಿದ್ದು, ಮಳೆಗಾಲದಲ್ಲಿ ನೀರು ನಿಂತುಕೊಂಡು ಮತ್ತಷ್ಟು ಸಮಸ್ಯೆ ಎದುರಾಗಲಿದೆ. ಇದರಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಲಿದ್ದು, ಈ ಕುರಿತು ಗ್ರಾಮಸ್ಥರು ತಮ್ಮ ಅಳಲು ತೋರ್ಪಡಿಸಿಕೊಳ್ಳುತ್ತಿದ್ದಾರೆ. ತಕ್ಷಣ ಬಸ್ ನಿಲ್ದಾಣ ದುರಸ್ಥಿಗೊಳಿಸುವಂತೆ ಮನವಿ ಮಾಡಲಾಗಿದೆ.
ಪಕ್ಷದ ಯುವ ಘಟಕದ ತಾಲೂಕು ಅಧ್ಯಕ್ಷ ಅರಳಿಹಳ್ಳಿ ತ್ಯಾಗರಾಜ್, ಪ್ರಚಾರ ಸಮಿತಿ ಅಧ್ಯಕ್ಷ ಪ್ರದೀಪ್ ವೈ.ಜೆ ರಾವ್, ಕಾರ್ಯದರ್ಶಿ ಚಿಂಪಯ್ಯ, ಸಂಘಟನಾ ಕಾರ್ಯದರ್ಶಿ ರಾಜೇಂದ್ರ ಉಪಸ್ಥಿತರಿದ್ದರು.
ಭದ್ರಾವತಿ ತಾಲೂಕಿನ ರಾಮನಗರ ಬಸ್ ನಿಲ್ದಾಣ ಹಾಳಾಗಿರುವುದು.
No comments:
Post a Comment