ಭದ್ರಾವತಿಯಲ್ಲಿ ಶುಕ್ರವಾರ ವಿಕಾಸ ತೀರ್ಥಯಾತ್ರೆ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
ಭದ್ರಾವತಿ, ಜೂ. ೧೬ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆದಿದ್ದು, ಪ್ರಸ್ತುತ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಅವರು ಶುಕ್ರವಾರ ನಗರದಲ್ಲಿ ವಿಕಾಸ ತೀರ್ಥಯಾತ್ರೆ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಗೊಂಡು ಆದೇಶ ಹೊರಡಿಸಿದ್ದು, ಇದರ ವಿರುದ್ಧ ನಿರಂತರ ಪ್ರಯತ್ನದ ಫಲವಾಗಿ ಮುಚ್ಚುವ ಆದೇಶದ ಪ್ರಕ್ರಿಯೆ ಮುಂದೂಡಲ್ಪಟ್ಟಿದೆ. ಪ್ರಸ್ತುತ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲಾಗಿದೆ. ಈ ನಡುವೆ ಗುತ್ತಿಗೆ ಕಾರ್ಮಿಕರ ಹಿತಕಾಪಾಡುವಲ್ಲಿ ಯಶಸ್ವಿಯಾಗಿದ್ದು, ಕಾರ್ಖಾನೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಈಗಲೂ ಮುಂದುವರೆಯುತ್ತಿದೆ ಎಂದರು.
ಇದೀಗ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷರನ್ನು, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕಾರ್ಖಾನೆ ಪುನಶ್ಚೇತನಕ್ಕೆ ಮನವಿ ಮಾಡಲಾಗಿದೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮುಖಂಡರಾದ ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಕೂಡ್ಲಿಗೆರೆ ಹಾಲೇಶ್, ಅಶೋಕ್‌ಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment