ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಗ್ರಾಮಸ್ಥರು ಬೆಂಬಲ : ಭರವಸೆ
ಭದ್ರಾವತಿ ತಾಲೂಕಿನ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ೨ ತಿಂಗಳಿನಿಂದ ವೇತನ ಬಿಡುಗಡೆಯಾಗದಿರುವ ಹಿನ್ನಲೆಯಲ್ಲಿ ಬುಧವಾರ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಆವರಣದಲ್ಲಿ ಮುಷ್ಕರ ನಡೆಸಲಾಯಿತು.
ಭದ್ರಾವತಿ, ಜೂ. ೭: ತಾಲೂಕಿನ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ೨ ತಿಂಗಳಿನಿಂದ ವೇತನ ಬಿಡುಗಡೆಯಾಗದಿರುವ ಹಿನ್ನಲೆಯಲ್ಲಿ ಬುಧವಾರ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಆವರಣದಲ್ಲಿ ಮುಷ್ಕರ ನಡೆಸಲಾಯಿತು.
೨ ತಿಂಗಳಿನಿಂದ ವೇತನ ಬಿಡುಗಡೆಯಾಗದ ಹಿನ್ನಲೆಯಲ್ಲಿ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಈ ಹಿಂದಿನ ಹೆಚ್ಚುವರಿ ವೇತನ ಸಹ ಬಿಡುಗಡೆಯಾಗಿಲ್ಲ. ತಕ್ಷಣ ವೇತನ ಬಿಡುಗಡೆ ಮಾಡುವಂತೆ ಗುತ್ತಿಗೆ ನೌಕರರ ಮನವಿ ಮೇರೆಗೆ ಹಾಗು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಆದೇಶದ ಮೇರೆಗೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಮುಷ್ಕರಕ್ಕೆ ಬೆಂಬಲ ಸೂಚಿಸಿ ಪಾಲ್ಗೊಂಡಿದ್ದರು.
ಮುಷ್ಕರನಿರತ ಸ್ಥಳಕ್ಕೆ ಆಗಮಿಸಿದ ಕುಲಸಚಿವೆ ಪ್ರೊ. ಗೀತಾ ಹಾಗು ಹಣಕಾಸು ಅಧಿಕಾರಿ ಪ್ರೊ. ವೈ.ಎಲ್ ರಾಮಚಂದ್ರರವರು ತಕ್ಷಣ ೨ ತಿಂಗಳ ವೇತನ ಬಿಡುಗಡೆ ಮಾಡಿಸುವುದಾಗಿ ಹಾಗು ಹೆಚ್ಚುವರಿ ವೇತನ ಕುರಿತು ಪರಿಶೀಲಿಸುವುದಾಗಿ ಭರವಸೆ ನೀಡಿದರು.
ತಾವರಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ್, ಸಿಂಗನಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಶಶಿಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಗಿರೀಶ್, ಪುನೀತ್, ದೇವರಗಿರಿ, ಕಾಂಗ್ರೆಸ್ ಪಕ್ಷದ ಮುಖಂಡ ಮುರುಗೇಶ್ ಹಾಗು ಶಂಕರಘಟ್ಟ ಜೈ ಕರ್ನಾಟಕ ವೇದಿಕೆ ಅಧ್ಯಕ್ಷ ಡಿ.ಟಿ ಶಶಿಕುಮಾರ್, ಕಾರ್ಯಾಧ್ಯಕ್ಷ ಶ್ರೀಕಾಂತ್ ನೇತೃತ್ವ ವಹಿಸಿದ್ದರು. ಮುಷ್ಕರದಲ್ಲಿ ಗ್ರಾಮಸ್ಥರು ಸಹ ಪಾಲ್ಗೊಂಡಿದ್ದರು.
No comments:
Post a Comment