Wednesday, June 14, 2023

ಚಾಲಕನ ನಿಯಂತ್ರ ಕಳೆದುಕೊಂಡು ಹಳ್ಳಕ್ಕೆ ಉರುಳಿದ ಕಾರು

    ಭದ್ರಾವತಿ, ಜೂ. ೧೪ : ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹಳ್ಳಕ್ಕೆ ಕಾರೊಂದು ಉರುಳಿ ಬಿದ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಸಿ.ಎನ್ ರಸ್ತೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮೀಪ ಚೌಡೇಶ್ವರಿ ದೇವಸ್ಥಾನದ ಹತ್ತಿರ ಜೂ.೮ರ ರಾತ್ರಿ ಸುಮಾರು ೧೧.೪೫ರ ಸಮಯದಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಪ್ರಾಣ ಉಂಟಾಗಿಲ್ಲ. ಸ್ವಲ್ಪ ಪ್ರಮಾಣದಲ್ಲಿ ಗಾಯಗಳಾಗಿದ್ದು, ಸಮೀಪದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
    ಮಹಮದ್ ಗೌಸ್, ಮುಸ್ತಾಫಾ ಮತ್ತು ವಾಸಿಂರವರು ಜೈನುದ್ದೀನ್ ಎಂಬಾತನ ಇನ್ನೋವಾ ಕಾರಿನಲ್ಲಿ ಅನ್ವರ್ ಕಾಲೋನಿಯಿಂದ ಸೀಗೆಬಾಗಿಗೆ ಹೊರಟಿದ್ದು, ಈ ಸಂದರ್ಭದಲ್ಲಿ ಚಾಲಕ ಜೈನುದ್ದೀನ್ ನಿಯಂತ್ರಣ ಕಳೆದುಕೊಂಡು ಕಾರು ಉರುಳಿ ಬಿದ್ದಿದೆ ಎನ್ನಲಾಗಿದೆ. ಈ ಸಂಬಂಧ ಸೈಯದ್ ಆಲ್ವಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚಾಲಕನ ನಿರ್ಲಕ್ಷ್ಯತನದ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

No comments:

Post a Comment